ಮಡಿಕೇರಿ ಜೂ.21 : ಜನ ಸ್ನೇಹಿ ಮತ್ತು ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ನೂತನ ಜಿಲ್ಲಾಧಿಕಾರಿ ವೆಂಕಟ್ ರಾಜ ಹೇಳಿದರು.
ಇಂದು ಅಧಿಕಾರ ಸ್ವೀಕಾರಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಬಗ್ಗೆ ಹೆಮ್ಮೆ ಇದೆ ಎಂದು ಮೆಚ್ಚುಗೆಯ ನುಡಿಯಾಡಿದರು.
ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಸಂದರ್ಭ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಮಳೆಗಾಲ ಎದುರಿಸಲು ಮೊದಲ ಆಧ್ಯತೆ ನೀಡಲಾಗುತ್ತದೆ ಎಂದು ಹೇಳಿದರು. ಈಗಾಗಲೇ ಜಿಲ್ಲಾಧಿಕಾರಿಗಳಾಗಿದ್ದ ಡಾ. ಬಿ.ಸಿ.ಸತೀಶ ಅವರಿಂದಲೂ ಮಳೆಗಾಲದ ಕುರಿತು ಮಾಹಿತಿ ಪಡೆದಿರುವುದಾಗಿ ಹೇಳಿದರು. ಜಿಲ್ಲೆಯ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯುವುದಾಗಿ ತಿಳಿಸಿದರು.









