ಮಡಿಕೇರಿ ಜೂ.22 : ಮಡಿಕೇರಿ- ಸಂಪಾಜೆ ರಸ್ತೆಯ ದೇವರಕೊಲ್ಲಿಯಲ್ಲಿ ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಲಾರಿ ಮಗುಚಿಕೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಸಂಪೂರ್ಣವಾಗಿ ಜಖಂಗೊoಡಿದ್ದು, ಅದೃಷ್ಟವಶಾತ್ ಇದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಲಾರಿ ಮಂಗಳೂರಿಗೆ ತೆರಳುತ್ತಿದ್ದರೆ, ಕಾರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.










