ಮಡಿಕೇರಿ ಜೂ.22 : ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕತ ಹಾಗೂ ಕಾಲೇಜಿನ ಸಂಚಾಲಕ ಕೆ. ಆರ್. ಗಂಗಾಧರ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿಗೆ ಭಾರತದ ಪ್ರಮುಖ ಕೊಡುಗೆಗಳಲ್ಲಿ ಯೋಗ ಪ್ರಮುಖವಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಗ ಪರಂಪರೆಗೆ ಅಂತಾರಾಷ್ಟ್ರೀಯ ಮಾನ್ಯತೆಯನ್ನು ತಂದು ಕೊಟ್ಟಿದ್ದಾರೆಂದು ಉಲ್ಲೇಖಿಸಿದರು.
ಬಾಲ್ಯದಿಂದ ನಿರಂತರವಾಗಿ ಯೋಗವನ್ನು ಅಭ್ಯಾಸ ಮಾಡಿದಾಗ ಆರೋಗ್ಯಯುತ ಜೀವನ ಸಾಗಿಸಲು ಸಾಧ್ಯ ಎಂದರು.
ಭೌತಶಾಸ್ತ್ರ ಉಪನ್ಯಾಸಕ ಹಾಗೂ ಪತಂಜಲಿ ಯೋಗ ಸಂಸ್ಥೆಯ ಸದಸ್ಯ ಸುರೇಶ್ ವಾಗ್ಲೆ ವಿದ್ಯಾರ್ಥಿಗಳಿಗೆ ಸೂಕ್ಷ್ಮ ವ್ಯಾಯಾಮ, ಆಸನಗಳು ಪ್ರಾಣಾಯಾಮಗಳ ಮಹತ್ವವನ್ನು ತಿಳಿಸಿ ಅಭ್ಯಾಸಮಾಡಿಸಿದರು. ಯೋಗ ಪರಿಣಿತ ದ ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಸಹಕರಿಸಿದರು.
ಕಾಲೇಜಿನ ಪ್ರಾಂಶುಪಾಲ ಎಸ್.ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಸಾಯನಶಾಸ್ತ್ರ ಉಪನ್ಯಾಸಕ ಲಿಂಗಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕಿ ಶಾಂತಿ, ಗಣಿತಶಾಸ್ತ್ರ ಭಾಗ್ಯಶ್ರೀ, ಸಮಾಜಶಾಸ್ತ್ರ ಉಪನ್ಯಾಸಕಿ ನಂದಿನಿ , ಕಂಪ್ಯೂಟರ್ ಶಿಕ್ಷಕಿ ಸೌಮ್ಯಶ್ರೀ ಹಾಗೂ ಕಛೇರಿ ಸಹಾಯಕ ಚಿದಾನಂದ ಹಾಜರಿದ್ದರು.
ಇತಿಹಾಸ ಉಪನ್ಯಾಸಕ ಮೋಹನಚಂದ್ರ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲಭಾಷ ಉಪನ್ಯಾಸಕಿ ಅಶ್ವಿನಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕಿ ವಿದ್ಯಾಶಾಲಿನಿ ವಂದಿಸಿದರು.








