ಕಡಂಗ ಜೂ.22 : ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜಯ ವಿದ್ಯಾ ಸಂಸ್ಥೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ, ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಡಂಗ ಆಯುರ್ವೇದ ವೈದ್ಯಾಧಿಕಾರಿ ಡಾ. ಶೈಲಜಾ ಮುರಳಿ, ವಿದ್ಯಾರ್ಥಿಗಳಿಗೆ ಯೋಗ ಎಂದರೆ ದೇಹ ಮತ್ತು ಮನಸ್ಸಿನ ಒಂದಾಗುವಿಕೆ ಎಂಬುದನ್ನು ತಿಳಿಸಿ ಏಕಾಗ್ರತೆಯನ್ನು ಸುಲಭವಾಗಿ ಸಾಧಿಸಬಹುದು ಎಂದು ನುಡಿದರು.
ಯೋಗ ತರಬೇತುದಾರರಾಗಿ ಸಿಂಧೂ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಸಂಸ್ಥೆ ಮುಖ್ಯ ಉಪಾಧ್ಯಾಯರಾದ ಸುಮಲತಾ ಹಾಗೂ ಸಹ ಶಿಕ್ಷಕರು ಹಾಜರಿದ್ದರು.
ವರದಿ : ನೌಫಲ್ ಕಡಂಗ








