Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹೆಚ್ಚಿನ ಮಳೆ ಸಾಧ್ಯತೆ : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು

*ಹೆಚ್ಚಿನ ಮಳೆ ಸಾಧ್ಯತೆ : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

June 22, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.22 : ಕೊಡಗು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದಲ್ಲಿ ಸಂಭವಿಸಬಹುದಾದ ಅನಾಹುತ ತಡೆಯುವ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
`ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 300 ಮಿ.ಮೀ. ಮಳೆ ಕಡಿಮೆ ಇದೆ. ಆದರೂ ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ವ್ಯಾಪಕ ಮಳೆಯಾದಲ್ಲಿ, ಮಳೆಯಿಂದ ಉಂಟಾಗಬಹುದಾದ ಅವಘಡವನ್ನು ತಪ್ಪಿಸಲು ಅಗತ್ಯ ಕಟ್ಟೆಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.’
ಹೆಚ್ಚಿನ ಮಳೆಯಿಂದ ಉಂಟಾಗಬಹುದಾದ ಪ್ರಾಣ ಹಾನಿ, ಜಾನುವಾರು ಹಾನಿ, ಆಸ್ತಿ-ಪಾಸ್ತಿ ಹಾನಿ ಹೀಗೆ ಪ್ರತಿಯೊಂದರ ಬಗ್ಗೆ ಎಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ತಮ್ಮ ಹಂತದಲ್ಲಿ ತಂಡೋಪಾದಿಯಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು ಎಂದು ವೆಂಕಟ್ ರಾಜಾ ಸೂಚಿಸಿದರು.
ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸ್ಥಳ ಪರಿಶೀಲಿಸಿ ಹೆಚ್ಚಿನ ಮಳೆಯಿಂದ ಪ್ರವಾಹ, ಬರೆ ಕುಸಿತ ಮತ್ತಿತರ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಅಧಿಕಾರಿಗಳು ರಜೆ ಹೋದಲ್ಲಿ ಮುಂಚಿತವಾಗಿ ಮಾಹಿತಿ ನೀಡಿ ಕೇಂದ್ರ ಸ್ಥಾನದಿಂದ ತೆರಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್, ನಗರ/ಪಟ್ಟಣ ಸ್ಥಳೀಯ ಸಂಸ್ಥೆಗಳು, ಸೆಸ್ಕ್, ನೀರಾವರಿ, ಅರಣ್ಯ, ಕಂದಾಯ, ಹೀಗೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಚರಂಡಿ ಹಾಗೂ ಸೇತುವೆಯಲ್ಲಿ ನೀರು ಸರಾಗವಾಗಿ ಹೋಗುವಂತೆ ಸರಿಪಡಿಸುವುದು. ಸೆಸ್ಕ್ ವಿಭಾಗದ ಅಧಿಕಾರಿಗಳು ಹಳೇ ವಿದ್ಯುತ್ ಕಂಬಗಳ ಬದಲಾವಣೆ, ಕೆಟ್ಟಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಿಸುವುದು ಹೀಗೆ ಹಲವು ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು.
ಇದೇ ಜೂ.27 ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಾ.ಪಂ.ಇಒಗಳು ಸೇರಿದಂತೆ ಎಂಜಿನಿಯರ್‍ಗಳು ಚರಂಡಿ, ಸೇತುವೆ ಬಗ್ಗೆ ಕೂಡಲೇ ವರದಿ ನೀಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರ ವಹಿಸಬೇಕು. ಗ್ರಾ.ಪಂ.ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.
ಅಂಗನವಾಡಿಗಳು, ಶಾಲೆಗಳ ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಜಾನುವಾರುಗಳಿಗೆ ಔಷಧಿ ಮತ್ತಿತರವನ್ನು ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಸೂಚಿಸಿದರು.
ಈ ಬಾರಿ ಜೂನ್ ತಿಂಗಳಲ್ಲಿ ಕಡಿಮೆ ಮಳೆಯಾಗಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ಎಚ್ಚರವಹಿಸಬೇಕು. ಜೊತೆಗೆ ನೀರಿನ ಟ್ಯಾಂಕ್ ಶುಚಿಗೊಳಿಸಿ ಸ್ವಚ್ಛತೆಯತ್ತ ಗಮನಹರಿಸಬೇಕು ಎಂದು ಡಾ.ಎಸ್.ಆಕಾಶ್ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮಾತನಾಡಿ, ಮಳೆ ಹಾನಿ ಹಾಗೂ ಮುನ್ನೆಚ್ಚರ ಬಗ್ಗೆ ವಿವಿಧ ಇಲಾಖೆ ಹಂತದಲ್ಲಿನ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿ ಎಲ್ಲಾ ಹಂತದ ಅಧಿಕಾರಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಜಿಲ್ಲೆಯಲ್ಲಿ ಇದುವರೆಗೆ 600 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆಯಾಗಿದೆ ಎಂದು ಮಾಹಿತಿ ನೀಡಿದರು.
ಸೆಸ್ಕ್ ಇಇ ಅನಿತಾ ಬಾಯಿ ಅವರು ಜಿಲ್ಲೆಯಲ್ಲಿ ಹಳೇ ವಿದ್ಯುತ್ ಕಂಬಗಳು ಹಾಗೂ ಕೆಟ್ಟು ಹೋಗಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಿಸಲಾಗಿದೆ. ಮುಂಗಾರು ಸಂಬಂಧ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಸುಂಟಿಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.
ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕುಮಾರಸ್ವಾಮಿ ಅವರು ಕೊಯನಾಡು ಸಮೀಪದ ಕಿಂಡಿ ಅಣೆಕಟ್ಟು ಬಳಿ ಹೂಳು ತೆಗೆಯಲಾಗಿದೆ ಎಂದರು.
ಜಿಲ್ಲಾ ಅಗ್ನಿ ಶಾಮಕ ಇಲಾಖೆಯ ಅಧಿಕಾರಿಯವರು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಪ್ರವಾಹ ಉಂಟಾದಲ್ಲಿ ಭಾಗಮಂಡಲ ಸೇರಿದಂತೆ ಅಗತ್ಯ ಇರುವ ಕಡೆ ಬೋಟ್‍ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಎನ್‍ಡಿಆರ್‍ಎಫ್ ತಂಡದ ಮುಖ್ಯಸ್ಥರಾದ ಶಾಂತಿಲಾಲ್ ಜಾಟಿಯಾ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಲೋಕೋಪಯೋಗಿ ಇಇ ಸಿದ್ದೇಗೌಡ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸುರೇಶ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಎಸಿಎಫ್ ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್. ನಾಯಕ್, ಕಾಫಿ ಮಂಡಳಿ ಉಪ ನಿರ್ದೇಶಕರಾದ ಚಂದ್ರಶೇಖರ್, ಡಿಯುಡಿಸಿ ಯೋಜನಾ ನಿರ್ದೇಶಕರಾದ ಬಸಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಇತರರು ಮುಂಗಾರು ಸಂಬಂಧ ಕೈಗೊಳ್ಳಲಾಗಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಭೂ ದಾಖಲೆಗಳ ಉಪನಿರ್ದೇಶಕರಾದ ಪಿ.ಶ್ರೀನಿವಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟರಾಜು, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ರೂಪೇಶ್ ಗೋಪಾಲ್, ಡಾ.ಸತೀಶ್, ಕಾರ್ಮಿಕ ಇಲಾಖೆ ಅಧಿಕಾರಿ ಎಂ.ಎಂ.ಯತ್ನಟ್ಟಿ, ಪೌರಾಯುಕ್ತರಾದ ವಿಜಯ್, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ತಹಶೀಲ್ದಾರರಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಶಾಂತ್, ಪ್ರಕಾಶ್, ತಾ.ಪಂ.ಇಒಗಳಾದ ಅಪ್ಪಣ್ಣ, ಜಯಣ್ಣ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಪ್ಪ ಹಳೆಯ ಸೇತುವೆ ಕೆಳಭಾಗದಲ್ಲಿ ಮೃತದೇಹ ಪತ್ತೆ*
Next Article *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಪ್ರವಾಸಿತಾಣಗಳ ಅಭಿವೃದ್ಧಿ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.