ಮಡಿಕೇರಿ ಜೂ.22 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪೂರ್ಣಗೊಂಡ ಅಮೃತ್ ಸರೋವರ ಕೆರೆಗಳ ದಡದಲ್ಲಿ “ವಿಶ್ವ ಯೋಗ ದಿನಾಚರಣೆ’ಯ ಮಹತ್ವ ತಿಳಿಸಲಾಯಿತು.
ಈಗಾಗಲೇ ಮನರೇಗಾ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿರುವ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಅಮೃತ ಸರೋವರ ದಡದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಹಾಗೂ ಶಾಲಾ ಮಕ್ಕಳನ್ನು ಒಗ್ಗೂಡಿಸಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲೆಯ ಪೊನ್ನಂಪೇಟೆ, ಮೂರ್ನಾಡು, ನಾಪೋಕ್ಲು, ಬಲ್ಯಮಂಡೂರು, ಕಿರುಗೂರು, ಕಡಗದಾಳು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅಮೃತ್ ಸರೋವರ ದಡದಲ್ಲಿ ಆಚರಿಸಲಾಯಿತು.
ಅಮೃತ ಸರೋವರ ತಾಣವು ಪ್ರಶಾಂತ ವಾತಾವರಣದಿಂದ ಕೂಡಿರುವ ಕಾರಣ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನು ಅಮೃತ್ ಸರೋವರ ದಡದಲ್ಲಿ ಆಚರಿಸಿ, ಜಲಸಂರಕ್ಷಣೆಯ ಮಹತ್ವ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು, ಶಾಲಾ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.









