ಮಡಿಕೇರಿ ಜೂ.22 : ಮಂಗಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ, ಫೀಲ್ಡ್ ಮಾಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಿವಿಧ ವಿಭಾಗಗಳ ಯುಜಿ ಮತ್ತು ಪಿಜಿ ಯ ರಾಜ್ಯ ಮಟ್ಟದ ಉತ್ಸವ “ಸಮನ್ವಯ-2023” ಉದ್ಘಾಟನಾ ಕಾರ್ಯಕ್ರಮವು ಜೂ.24 ರಂದು ನಡೆಯಲಿದೆ.
ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ರೇಡಿಯಾಲಜಿಸ್ಟ್ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ಭಜನ್ ಬೋಪಣ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ವಿಶೇಷ ಆಹ್ವಾನಿತರಾಗಿ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ಭಾಗವಹಿಸಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 4.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಮೌಲ್ಯಾಧಾರಿತ ಕಾರ್ಯಕ್ರಮಗಳು ನಡೆಯಲಿದೆ.









