ಚೆಯ್ಯಂಡಾಣೆ ಜೂ 23 : ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಚೇನಂಡ ಗಿರೀಶ್ ಪೂಣಚ್ಚ ಯೋಗಾ ಪ್ರದರ್ಶನದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಪ್ರಯೋಜನವನ್ನು ತಿಳಿಸಿದರು.
ಈ ಸಂದರ್ಭ ದೈಹಿಕ ಶಿಕ್ಷಕ ಪಿ.ಬಿ. ಪೊನ್ನಪ್ಪ, ಮುಖ್ಯ ಶಿಕ್ಷಕಿ ಭವ್ಯ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ : ಅಶ್ರಫ್