ಮಡಿಕೇರಿ ಜೂ.23 : ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಚೆಟ್ಟಳ್ಳಿ ಕೇಂದ್ರೀಯ ಕೃಷಿ ಸಂಶೋಧನಾ ತೋಟಗಾರಿಕಾ ಇಲಾಖೆಯ ನಿರ್ದೇಶಕ ಮುರಳೀಧರ್ ಪಾಲ್ಗೊಂಡು ಸಂಸ್ಥೆಗೆ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೀಡಿದರಲ್ಲದೇ, ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಅವುಗಳ ಪಾಲನೆ ಪೋಷಣೆಯ ಕುರಿತು ತಿಳಿಸಿದರು.
ಸೋಮವಾರಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಚೇತನ್ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ಕಾಂಡ್ಲಾ ವನ ಬೆಳೆಸುವ ಯೋಜನೆಯನ್ನು ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ತೀರ ಪ್ರದೇಶದ ಕಡಲ ಕೊರೆತ ವನ್ನು ತಡೆಗಟ್ಟುವಲ್ಲಿ ಸಸ್ಯಸಂಕುಲದ ಪ್ರಾಮುಖ್ಯತೆಯನ್ನು ತಿಳಿಸಿದರು.
ಅಪ್ಪಂಗಳದ ಕೇಂದ್ರೀಯ ಸಂಬಾರ ಮಂಡಳಿಯ ವಿಜ್ಞಾನಿ ಅಕ್ಷತಾ ಹಾಗೂ ಸ್ಥಳೀಯ ಗ್ರಾ.ಪಂ ಸದಸ್ಯೆ ಉಷಾ ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದರು.
ಶ್ರೀಮತಿ ಡಿ.ಚೆನ್ನಮ್ಮ ಪದವಿಪೂರ್ವ ಸಂಸ್ಥೆಯ ಆವರಣದಲ್ಲಿ ಗಿಡಗಳನ್ನು ನೀಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ದಿನಾಚರಣೆಯ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಯ ಸಿಬ್ಬಂದಿಗಳು ಹಾಜರಿದ್ದರು. ಹಿರಿಯ ಉಪನ್ಯಾಸಕ ರಾಜಸುಂದರಂ ಸ್ವಾಗತಿಸಿ, ಉಪನ್ಯಾಸಕಿ ಪ್ರಮೀಳ ನಿರೂಪಿಸಿದರು.