ಮಡಿಕೇರಿ ಜೂ.23 : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ ಡಿ.ಜೆ.ಜವರಪ್ಪ ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ತಿಳಿಸಿದರು.
ದೈಹಿಕ ಉಪನ್ಯಾಸಕರಾದ ಟಿಶೋನಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಆಯೋಗ ಆಸನಗಳನ್ನು ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರರು ಹಾಜರಿದ್ದರು.









