ಮಡಿಕೇರಿ ಜೂ.23 : ಮಣಿಪುರ ರಾಜ್ಯದಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ರಿಶ್ಚಿಯನ್ ಘಟಕ, ಕೇಂದ್ರ ಸರ್ಕಾರದ ವಿರುದ್ಧ ಜೂ.28 ರಂದು ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರಿಶ್ಚಿಯನ್ ಘಟಕದ ಪ್ರಮುಖರು ಕೇಂದ್ರ ಸರ್ಕಾರದ ನಿಷ್ಕ್ರೀಯ ಧೋರಣೆಯಿಂದ ಮಣಿಪುರದಲ್ಲಿ ಚರ್ಚ್‍ಗಳ ಮೇಲೆ ದಾಳಿಯಾಗುತ್ತಿದೆ ಮತ್ತು ಕ್ರೈಸ್ತರನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿದರು.
ಕೇಂದ್ರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಮತ್ತು ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಕ್ರೈಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಸಂತ ಮೈಕಲರ ಚರ್ಚ್ ಬಳಿಯಿಂದ ಜನರಲ್ ತಿಮ್ಮಯ್ಯ ವೃತ್ತ ಮತ್ತು ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಧರ್ಮಗುರುಗಳು, ಧಾರ್ಮಿಕ ಮುಖಂಡರು ಹಾಗೂ ಸರ್ವ ಕ್ರೈಸ್ತ ಬಾಂಧವರು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜಾನ್ಸ್ ನ್ ಪಿಂಟೋ, ತೆರೇಸಾ ವಿಕ್ಟರ್, ಜೋಕಿಂ ರಾಡ್ರಿಗಸ್, ಅಗಸ್ಟಿನ್ ಜಯರಾಜ್, ಸುನೀಲ್ ಪತ್ರಾವೊ, ವಿ.ಎ.ಲಾರೆನ್ಸ್, ಫಿಲೋಮಿನಾ ಹಾಗೂ ಅಗಸ್ಟಿನ್ ಬೆನ್ನಿ ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*