ಮಡಿಕೇರಿ ಜೂ.23 : ನಗರದ ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ‘ಪಂದ್ಯಂಡ ಬೆಳ್ಯಪ್ಪ’ ಅವರ ಹೆಸರನ್ನು ಇಡಬೇಕೆಂದು ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರಸಭೆ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾಮಿ ವಿವೇಕಾನಂದರ ಹೆಸರಿನ್ನಿರಿಸಲು ಮುಂದಾಗಿ, ಜೂನ್ ಅಂತ್ಯದ ಒಳಗಾಗಿ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಈ ಹಿನ್ನೆಲೆ ಸಾರ್ವಜನಿಕರ ಪರವಾಗಿ ವೃತ್ತಕ್ಕೆ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನು ಇಡುವಂತೆ ಸೂಚಿಸಿ ಆಕ್ಷೇಪಣೆ ಸಲ್ಲಿಸಲಾಗಿದೆ. ಇದು ಯಾವುದೇ ಕಾರಣಕ್ಕೂ ಸ್ವಾಮಿ ವಿವೇಕಾನಂದರ ಇಡೀ ಜಗತ್ತೆ ಮಾನ್ಯ ಮಾಡಿರುವ ತತ್ತ್ವ ಸಿದ್ಧಾಂತಗಳ ವಿರುದ್ಧವಾಗಿ ಅಲ್ಲವೆಂದು ಸ್ಪಷ್ಟಪಡಿಸಿದರು.
ಕೊಡಗಿನಲ್ಲಿ ಕೊಡಗಿಗಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿದ ಮಹನೀಯರನ್ನು ಸ್ಮರಿಸುವುದು, ಅವರ ಚಿಂತನೆಗಳನ್ನು ಜನರಿಗೆ ಮುಟ್ಟಿಸುವುದು ಮತ್ತು ಆ ಮೂಲಕ ಯುವ ಸಮೂಹಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಈ ಹಿನ್ನೆಲೆ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾದ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನು ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಇರಿಸಬೇಕು ಮತ್ತು ಅಲ್ಲಿ ಸ್ಥಾಪಿಸುವ ಅವರ ಪುತ್ತಳಿಯ ಬಳಿ ಅವರ ಹೋರಾಟದ ಬದುಕು, ಸಾಧನೆಯ ಮಾಹಿತಿ ದೊರಕುವಂತೆ ಮಾಡಬೇಕೆಂದು ಒತ್ತಾಯಿಸಿದರು.
ಸ್ವಾತಂತ್ರ್ಯ ಚಳುವಳಿ ಸಂದರ್ಭ ರಾಷ್ಟ್ರ ನಾಯಕರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಪಂದ್ಯಂಡ ಬೆಳ್ಯಪ್ಪ ಅವರು, ಹಲವಾರು ಬಾರಿ ಕಾರಾಗೃಹ ವಾಸವನ್ನು ಅನುಭವಿಸಿದವರು, 1934ರಲ್ಲಿ ಮಹಾತ್ಮಾ ಗಾಂಧೀಜಿಯವರು ಕೊಡಗಿಗೆ ಆಗಮಿಸಲು ಕಾರಣರಾದ ಮಹನೀಯರು. ಜಿಲ್ಲೆಯಲ್ಲಿ ಶೋಷಿತ ಮುದಾಯಗಳ ಉದ್ಧಾರಕ್ಕಾಗಿ ಶ್ರಮಿಸಿದ ಪಂದ್ಯಂಡ ಬೆಳ್ಯಪ್ಪ ಅವರು, ಆ ದಿನಗಳಲ್ಲೆ ಶಿಕ್ಷಣದ ಮಹತ್ವವನ್ನು ಅರಿತು ಮಡಿಕೇರಿಯಲ್ಲಿ ಈಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸ್ಥಾಪನೆಗೆ ಕಾರಣರಾದ ಮಹಾನ್ ವ್ಯಕ್ತಿ. ಇವರ ಸ್ವಾತಂತ್ರ್ಯ ಹೋರಾಟದಲ್ಲಿನ ಮಹತ್ತರ ಪಾತ್ರವನ್ನು ಗಮನಿಸಿ, ಸರ್ಕಾರ ನೀಡಿದ ಇಪ್ಪತ್ತು ಏಕರೆ ಜಾಗವನ್ನು ಸರ್ಕಾರಕ್ಕೆ ಮರಳಿಸಿದ ಧೀಮಂತ ವ್ಯಕ್ತಿ ಪಂದ್ಯಂಡ ಬೆಳ್ಯಪ್ಪ ಅವರಾಗಿದ್ದು, ಅವರ ಹೆಸರಿನ ವೃತ್ತ ಸ್ಥಾಪನೆಯಾಗಬೇಕೆನ್ನುವುದು ನಮ್ಮೆಲ್ಲರ ಅಪೇಕ್ಷೆ ಎಂದರು.
ಸ್ವಾತಂತ್ರ್ಯ ಭವನ : ಪ್ರಸ್ತುತ ನಗರಸಭೆಯ ಪಕ್ಕದಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಕಾವೇರಿ ಕಲಾಕ್ಷೇತ್ರವನ್ನು ‘ಪಂದ್ಯಂಡ ಬೆಳ್ಯಪ್ಪ ಸ್ವಾತಂತ್ರ್ಯ ಹೋರಾಟಗಾರರ ಭವನ’ವನ್ನಾಗಿ ರೂಪಿಸಿ, ಅಲ್ಲಿ, ಜಿಲ್ಲೆಯ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಲಭಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ರಂಗ ಭೂಮಿ ಕಲಾವಿದ ಮಾದೇಟಿರ ಬೆಳ್ಯಪ್ಪ, ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನಿಡುವ ಮೂಲಕ, ಅವರ ಮಾಹಿತಿ ಅದೇ ಹಾದಿಯಲ್ಲಿ ಸಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ದೊರಕುವಂತೆ ಮಾಡಬೇಕೆಂದರು.
ಸಮಾಜ ಸೇವಕ ಅಯ್ಯಲಪಂಡ ಪುಷ್ಪಾ ಪೂಣಚ್ಚ ಮಾತನಾಡಿ, ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನು ವೃತ್ತಕ್ಕೆ ಇಡಬೇಕು ಎನ್ನುವ ನಮ್ಮ ಆಗ್ರಹ, ಯಾವುದೇ ಕಾರಣಕ್ಕು ಸ್ವಾಮಿ ವಿವೇಕಾನಂದರ ವಿರುದ್ಧವಾದುದಲ್ಲವೆಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜ ಸೇವಕ ಮಂಡೀರ ಸದಾ ಮುದ್ದಪ್ಪ ಉಪಸ್ಥಿತರಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*