ಮಡಿಕೇರಿ ಜೂ.23 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಜೂ.27 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಗ್ಗೆ 8.30 ಗಂಟೆಗೆ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.30 ಗಂಟೆಗೆ ಕೊಡಗು ಜಿ.ಪಂ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.









