ಮಡಿಕೇರಿ ಜೂ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯು ಜೂನ್, 27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಮಂಥರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ವಕೀಲರಾದ ಕೆ.ಆರ್.ವಿದ್ಯಾಧರ ಅವರು ಉಪನ್ಯಾಸ ನೀಡಲಿದ್ದಾರೆ.









