ಮಡಿಕೇರಿ ಜೂ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ `ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ’ಯು ಜೂ.26 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್, ಮಡಿಕೇರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ಯು.ಚೇತನ್, ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ ಇತರರು ಪಾಲ್ಗೊಳ್ಳಲಿದ್ದಾರೆ. ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ಉಪನ್ಯಾಸ ನೀಡಲಿದ್ದಾರೆ.









