ಕಡಂಗ ಜೂ.24 : ಬಕ್ರೀದ್ ಹಬ್ಬದ ಹಿನ್ನೆಲೆ ಗೋಣಿಕೊಪ್ಪಲು ರಾಧ ಟೂರಿಸ್ಟ್ ಸಭಾಂಗಣದಲ್ಲಿ ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ಗೋಣಿಕೊಪ್ಪಲು ನಗರದ ಮೂರು ಮಸೀದಿಗಳ ಸಮಿತಿಯ ಪದಾಧಿಕಾರಿಗಳು ಹಾಗೂ ಇತರೆ ಸಂಘ ಸಂಸ್ಥೆಗಳ ನೇತಾರರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಹಲವು ಸಂಘ ಸಂಸ್ಥೆಗಳ ನೇತಾರರು ಮಾತನಾಡಿ, ಈ ಭಾಗದಲ್ಲಿ ನಾವುಗಳು ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಬಾಳುತ್ತಿದ್ದೇವೆ ಈ ವರೆಗೆ ನಮ್ಮ ಭಾಗದಲ್ಲಿ ಯಾವುದೇ ಹಬ್ಬದ ಸಂದರ್ಭಗಳಲ್ಲಿ ಅಹಿತಕರ ಘಟನೆಗಳು ನಡೆದಿಲ್ಲ ಮುಂದೆಯೂ ಕೂಡ ನಾವು ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಮಾತನಾಡಿ, ಪ್ರತೀ ವರ್ಷವೂ ಈ ಭಾಗದಲ್ಲಿ ಎಲ್ಲಾ ಧರ್ಮಗಳ ಹಬ್ಬಗಳು ಬಹಳ ಶಾಂತಿಯುತವಾಗಿ ನಡೆಯುತ್ತಿರುವುದು ಬಹಳ ಸಂತಸದ ವಿಷಯ ಮುಂದೆಯೂ ಕೂಡ ನಿಮ್ಮ ಸೌಹಾರ್ದತೆ ಕಾಪಾಡಿ ಸಮಾಜಕ್ಕೆ ಮಾದರಿಯಾಗಿ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಭೆಯಲ್ಲಿ ಗೋಣಿಕೊಪ್ಪಲು ಪೊಲೀಸ್ ವೃತ ನೀರಿಕ್ಷಕ ಗೋವಿಂದರಾಜು, ಗೋಣಿಕೊಪ್ಪಲು ಪೊಲೀಸ್ ಠಾಣಾಧಿಕಾರಿ ದೀಕ್ಷಿತ್ ಕುಮಾರ್, ಪೊನ್ನಂಪೇಟೆ ಠಾಣಾಧಿಕಾರಿ ಲಕ್ಷ್ಮಣ್ ಕಮಣ್ಣವರ್ ಹಾಗೂ ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹಕೀಮ್ ಮತ್ತು ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
ವರದಿ : ನೌಫಲ್ ಕಡಂಗ