ಮಡಿಕೇರಿ ಜೂ.24 : ವರ್ಷದ ಹಿಂದೆ ನಮ್ಮನ್ನು ಅಗಲಿರುವ ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕರು, ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಆಗಿದ್ದ *ಪತ್ರಕರ್ತ ಬಿ.ಎನ್.ಮನು ಶೆಣೈ* ಅವರ ನೆನಪಿನ ಕಾರ್ಯಕ್ರಮವು ಜೂ.26 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನ ದ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವು ಕೊಡಗು ಪತ್ರಿಕಾ ಭವನ ಟ್ರಸ್ಟ್, ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಸಮಾಚಾರ ಅಭಿಮಾನಿ ಬಳಗ ವತಿಯಿಂದ ಜರುಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು, ಉದ್ಘಾಟನೆಯನ್ನು ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ನೆರವೇರಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಮಂಗಳೂರಿನ ನಿವೃತ್ತ ಉಪನ್ಯಾಸಕ ಐವಾನ್ ಡಿ’ಸಿಲ್ವಾ, ಮುಖ್ಯ ಅತಿಥಿಗಳಾಗಿ , ಸಮಾಜ ಸೇವಕರಾದ ವಿ.ಪಿ.ಶಶಿಧರ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ ಮುರುಳಿಧರ ಉಪಸ್ಥಿತರಿರುತ್ತಾರೆ ಎಂದು ಪತ್ರಿಕಾ ಭವನ ಟ್ರಸ್ಟ್ ನ ಕಾರ್ಯದರ್ಶಿ ಎಸ್.ಜಿ.ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.