ಮೈಸೂರು ಜೂ.24 : ಗೃಹಲಕ್ಷ್ಮೀ ಯೋಜನೆಗೆ ಜೂ. 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಆ್ಯಪ್ ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ ಎಂದು ಹೇಳಿದ್ದಾರೆ.