ಮಡಿಕೇರಿ ಜೂ.24 : ಭಾರತ ಸೇವಾದಳದ ವತಿಯಿಂದ 9ನೇ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸರಕಾರಿ ಪದವಿ ಪೂರ್ವ ಪ್ರೌಢ ಶಾಲೆಯ ಮಕ್ಕಳು ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮಕ್ಕಳು ಸೇರಿದಂತೆ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಭಂಗಿಯ ಯೋಗ ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ಜಿಲ್ಲಾ ಸಂಘಟಕರಾದ ಜಿ.ಈ.ರೇವಣ್ಣ, ಸರಕಾರಿ ಪದವಿ ಪೂರ್ವ ಪ್ರೌಢ ಶಾಲೆಯ ಪ್ರಾಂಶುಪಾಲರಾದ ಪಿ.ಕೆ.ನಳಿನಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಶೀಲ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಸಂದೇಶ್ ಪಾಲ್ಗೊಂಡಿದ್ದರು.
ಯೋಗಾಭ್ಯಾಸದ ನಂತರ ಭಾರತ ಸೇವಾದಳದ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ದೈಹಿಕ ಶಿಕ್ಷಣ ಸಮನ್ವಯ ಅಧಿಕಾರಿ ಡಾ.ಹರಿಹರನ್ ಪಲ್ಯದ್ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.









