ಮಡಿಕೇರಿ ಜೂ.25 : ಇನ್ನೊಬ್ಬರ ಒತ್ತಡಕ್ಕೆ ಮಣಿಯದೆ ತಮ್ಮ ಮನಸ್ಸಿಗೆ ಹಿಡಿಸುವ ವೃತ್ತಿಯ ಕಡೆಗೆ ಆಸಕ್ತಿ ಬೆಳೆಸಿಕೊಂಡು ಮಕ್ಕಳು ಈ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಸಮಾಜ ಸೇವಕ ಸಂಕೇತ್ ಪೂವಯ್ಯ ಕಿವಿಮಾತು ಹೇಳಿದರು.
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಭಾನುವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಪೋಷಕರು, ಗುರುಗಳ ಮಾರ್ಗದರ್ಶನದಲ್ಲಿ ಮಕ್ಕಳು ಇನ್ನೂ ಚೆನ್ನಾಗಿ ಓದಬೇಕು. ಮಕ್ಕಳು ಒಳ್ಳೆಯ ಸ್ನೇಹ ಬಳಗ ಬೆಳೆಸಿಕೊಳ್ಳಬೇಕು. ಗೆಳೆಯರ ಮಧ್ಯೆ ಸಾತ್ವಿಕ ಚರ್ಚೆ ನಡೆಯಬೇಕು. ಪ್ರಕೃತಿ ಮೇಲೆ ಮಕ್ಕಳು ಪ್ರೀತಿ ಬೆಳೆಸಿಕೊಳ್ಳಬೇಕು. ತಂತ್ರಜ್ಞಾನದ ಪ್ರಯೋಜನ ಪಡೆದುಕೊಳ್ಳಬೇಕು. ಹೆಚ್ಚು ಹೆಚ್ಚು ಆಟವಾಡಬೇಕು. ಗ್ರಂಥಾಲಯದ ಬಳಕೆ ಆಗಬೇಕು. ಪ್ರಕೃತಿ ಉಳಿಸುವ ಸಂಬಂಧ ವಾರಕ್ಕೆ ಕನಿಷ್ಠ 2 ಗಂಟೆ ಕಲಿಯುವಂತಾಗಬೇಕು ಎಂದರು.
ಮಕ್ಕಳನ್ನು ಪ್ರಕೃತಿ ಮಡಿಲಿಗೆ ಕರೆದುಕೊಂಡು ಹೋಗಿ ಕಲಿಸುವ ವ್ಯವಸ್ಥೆ ಆಗಬೇಕು. ಮಕ್ಕಳಿಗೆ ಕಾಡು ತೋರಿಸುವ ಜವಾಬ್ದಾರಿ ಸರ್ಕಾರದ್ದು ಎಂದ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ದೇಶ ಮತ್ತು ಸಮಾಜಕ್ಕೆ ನಿರೀಕ್ಷಿತ ಕೊಡುಗೆ ಸಿಗುತ್ತಿಲ್ಲ ಎಂದು ವಿಷಾದಿಸಿದರು. ಪ್ರಜಾತಂತ್ರ ಬೇರು ಗಟ್ಟಿ ಮಾಡಬೇಕು. ಜಾತಿ ವ್ಯವಸ್ಥೆ ತೊಲಗಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳು ತಮಗಿಷ್ಟದ ಸಿದ್ದಾಂತ ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಉಳ್ಳಿಯಡ ಪೂವಯ್ಯ ಮಾತನಾಡಿ, ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸುವುದು ಸ್ವಾಗತಾರ್ಹ. ಮಕ್ಕಳ ಪ್ರತಿಭೆ ಗುರುತಿಸಲು ಅವಕಾಶ ಸಿಗಬೇಕು. ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರ ಬದುಕಿಗೆ ದಾರಿ ತೋರಿಸಿದಂತಾಗುತ್ತದೆ ಎಂದು ಹೇಳಿದರು.
ಬೆಳ್ಳಿಹಬ್ಬ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಮಾತನಾಡಿ ಮಾಧ್ಯಮದವರು ಎಂದರೆ ಪ್ರಚಾರಕ್ಕೆ ಬಳಸಿಕೊಳ್ಳುವ ಯಂತ್ರ ಎಂಬಂತೆ ಪರಿಗಣಿಸಲಾಗಿದೆ. ಪತ್ರಕರ್ತರಿಗೆ ಬೈಗುಳವೇ ಸಿಗುತ್ತಿದೆ. ಸುದ್ದಿ ಪ್ರಕಟವಾದಾಗ ಗುರುತಿಸುವುದು ಕಡಿಮೆ. ಪ್ರತಿಭಾ ಪುರಸ್ಕಾರದಂತಹ ಕಾರ್ಯ ಮುಂದುವರಿಯಬೇಕು. ಪತ್ರಕರ್ತರಲ್ಲಿ ಒಗ್ಗಟ್ಟು ಇರಬೇಕು. ಪತ್ರಕರ್ತರ ಸಂಕಷ್ಟಗಳಿಗೆ ಸಹಕಾರಿ ಆಗಲು ಶಾಶ್ವತ ನಿಧಿ ಒಂದನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿ, ಪೋಷಕರ ಮುಂದೆಯೇ ಮಕ್ಕಳಿಗೆ ಗೌರವ ನೀಡುವುದು ಒಂದು ಸುಸಂದರ್ಭ. ಈ ನೆನಪು ಬದುಕಿನ ಉದ್ದಕ್ಕೂ ಇರುತ್ತದೆ. ಮಕ್ಕಳು ಸನ್ಮಾನ ಸ್ವೀಕರಿಸುವಾಗ ಪೋಷಕರಿಗೂ ಖುಷಿ. ಅರ್ಥಪೂರ್ಣ ಕಾರ್ಯಕ್ಕಮಕ್ಕೆ ಪ್ರೆಸ್ ಕ್ಲಬ್ ವೇದಿಕೆ ಆಗಿದೆ ಎಂದು ಹೇಳಿದರು.
ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಚೀಯಂಡಿ ತೇಜಸ್ ಪಾಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಪತ್ರಕರ್ತ ಹಿರಿಕರ ರವಿ ಅವರಿಗೆ ಕೆ.ಬಿ. ಮಹಂತೇಶ್ ಸ್ಮಾರಕ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ್ಲಬ್ ಸದಸ್ಯರ 31 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭ ಪ್ರೋತ್ಸಾಹಿಸಿ ಗೌರವಿಸಲಾಯಿತು.
ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಗುಹ್ಯ ಸೇರಿದಂತೆ ಪ್ರೆಸ್ ಕ್ಲಬ್ ಪದಾಧಿಕಾರಿಗಳು ಇದ್ದರು.
ಕಾರ್ಯಕ್ರಮಕ್ಕೂ ಮೊದಲು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*