ಮಡಿಕೇರಿ ಜೂ.25 : ಇತ್ತೀಚೆಗೆ ಶಾರ್ಜಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೊಡಗು ಜಿಲ್ಲೆಯ ಗುಂಡಿಕೆರೆ ಗ್ರಾಮದ ಪ್ರವೀಣ್ ಕೆ.ಪಿ ಅವರ ಮೃತದೇಹವನ್ನು ರಫೀಕಲಿ ಕುಂಡಂಡ ಕುಂಜಿಲ ಅವರ ಸಹಕಾರದಿಂದ ಸ್ವಗ್ರಾಮಕ್ಕೆ ತರಲಾಗಿದೆ.
ಶಾರ್ಜಾದಲ್ಲಿ ಉದ್ಯೋಗದಲ್ಲಿದ್ದ ಪ್ರವೀಣ್ ತನ್ನ ಸ್ನೇಹಿತನೊಂದಿಗೆ ರಸ್ತೆ ದಾಟುವಾಗ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಕೊಡಗಿನ ಗುಂಡಿಕೆರೆ ಗ್ರಾಮದ ಕನ್ನಡಿಗ ಪ್ರವೀಣ್ ಅವರ ಮೃತ ದೇಹವನ್ನು ಅವರು ಕೆಲಸ ನಿರ್ವಹಿಸುವ ಕಚೇರಿಯ ಮುಖ್ಯಸ್ಥ ಅಸ್ಸಾಂ ಮೂಲದ ಬಾಬರ್, ದುಬೈ ಕನ್ನಡ ಸಂಘ ಮತ್ತು ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ಸಹಕಾರದೊಂದಿಗೆ ಹಲವು ದಿನಗಳ ನಂತರ ತಾಯಿನಾಡಿಗೆ ತರಲಾಯಿತು,
ಗುಂಡಿಕೆರೆ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಫೀಕ್ ಅವರು ದುಬೈಯಲ್ಲಿರುವ ಬಾಬರ್ ಹಾಗೂ ರಫೀಕಲಿ ಅವರಿಗೆ ಪ್ರವೀಣ್ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿ ಸಹಾಯ ಕೋರಿದ್ದರು. ಮೃತ ದೇಹವನ್ನು ಪಡೆಯಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡ ರಫೀಕ್ ಗುಂಡಿಕೆರೆ, ವಿಮಾನ ನಿಲ್ದಾಣಕ್ಕೆ ಹೋಗಿ ಮೃತ ದೇಹವನ್ನು ಪಡೆದು ಅಂತಿಮ ಸಂಸ್ಕಾರ ನೆರವೇರಿಸುವ ಸಂದರ್ಭವೂ ಸಂಪೂರ್ಣ ಸಹಕಾರ ನೀಡಿ ಮಾನವೀಯತೆ ಮೆರೆದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*