ಮಡಿಕೇರಿ ಜೂ.25 : ವಿರಾಜಪೇಟೆ ತಾಲ್ಲೂಕಿನ ಅಮ್ಮತಿ ಸಮೀಪ ಒಂಟಿಯಂಗಡಿ ಗ್ರಾಮದ ಸುತ್ತಮುತ್ತ ಕೃಷಿ ಫಸಲು ನಾಶ ಮಾಡಿ ಕಾರ್ಮಿಕರು ಹಾಗೂ ಮಾಲೀಕರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಒಂಟಿಯಂಗಡಿಯ ಕಾಫಿ ತೋಟವೊಂದರಲ್ಲಿ ಏಳು ಕಾಡಾನೆಗಳೊಂದಿಗೆ ಕಾಣಿಸಿಕೊಂಡ 32 ವರ್ಷದ ಪುಂಡಾನೆಯನ್ನು ಸಾಕಾನೆಗಳ ಸಹಕಾರದಿಂದ ಅರೆವಳಿಕೆ ನೀಡಿ ಸೆರೆ ಹಿಡಿಯಲಾಯಿತು. ರಸ್ತೆಗೆ ಕರೆತಂದ ನಂತರ ಲಾರಿಯನ್ನೇರಲು ನಿರಾಕರಿಸಿದ ಕಾಡಾನೆಯನ್ನು ಜೆಸಿಬಿ ಕ್ರೇನ್ ಬಳಸಿ ಲಾರಿಗೆ ಹಾಕಲಾಯಿತು. ನಂತರ ರೇಡಿಯೋ ಕಾಲರ್ ಅಳವಡಿಸಿ ಬಂಡೀಪುರಕ್ಕೆ ಸ್ಥಳಾಂತರಿಸಲಾಯಿತು.
ಅಮ್ಮತ್ತಿ, ಪುಲಿಯೇರಿ, ಇಂಜಲಗೆರೆ, ಒಂಟಿಯಂಗಡಿ, ಕಣ್ಣಂಗಾಲ ಮತ್ತಿತರ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಕಾಡಾನೆ ಮೂವರ ಮೇಲೆ ದಾಳಿ ಮಾಡಿತ್ತು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ತಕ್ಷಣ ಉಪಟಳ ನೀಡುತ್ತಿರುವ ಕಾಡಾನೆಯನ್ನು ಸೆರೆ ಹಿಡಿಯುವಂತೆ ಸೂಚಿಸಿದ ಹಿನ್ನೆಲೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತು.
ಮತ್ತಿಗೋಡು ಸಾಕಾನೆ ಶಿಬಿರದ ನಾಲ್ಕು ಸಾಕಾನೆಗಳು, ಮಾವುತರು, ಕಾವಾಡಿಗರ ಸಹಕಾರ ಪಡೆದು ನಡೆಸಿದ ಕಾರ್ಯಾಚರಣೆಯಲ್ಲಿ ಡಿಎಫ್‌ಓ ಶರಣಬಸಪ್ಪ, ಎಸಿಎಫ್ ನೆಹರು ಆರ್‌ಎಫ್‌ಓ ಕಳ್ಳಿರ ಎಂ.ದೇವಯ್ಯ, ಅಧಿಕಾರಿಗಳಾದ ಸಂಜಿತ್ ಸೋಮಯ್ಯ, ಕನ್ನಂಡ ರಂಜನ್, ನಿಂಬಾಳ್ಕರ್, ಚಂದ್ರಶೇಖರ್, ಆನಂದ, ಅನಿಲ್, ಅರುಣ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*