ಮಡಿಕೇರಿ ಜೂ.25 : ಚಾಲಕನ ನಿಯಂತ್ರಣ ಕಳೆದುಕೊಂಡ ಇನ್ನೋವಾ ಕಾರೊಂದು ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಿಂಕೋನ ಬಳಿ ನಡೆದಿದೆ. ಮಂಗಳೂರು ಮೂಲದ 8 ಮಂದಿ ಯುವಕರು ಮಡಿಕೇರಿ ಮಾರ್ಗವಾಗಿ ಕುಶಾಲನಗರ ಕಡೆಗೆ ತೆರಳುತ್ತಿದ್ದ ಸಂದರ್ಭ ಸಿಂಕೋನ ಬಳಿ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮನೆಯ ಮುಂದಿನ ಅಂಗಳಕ್ಕೆ ಉರುಳಿ ಬಿದ್ದಿದೆ.
ತುಂತುರು ಮಳೆ ಮತ್ತು ದಟ್ಟ ಮಂಜು ಮುಸುಕಿದ ವಾತಾವರಣ ಇದ್ದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿಯಾಗಿದ್ದು, ಮನೆ ಮಂದಿಗೆ ಅದೃಷ್ಟವಶಾತ್ ಏನೂ ಆಗಿಲ್ಲ.










