ಸುಂಟಿಕೊಪ್ಪ,ಜೂ.26 : 7ನೇ ಹೊಸಕೋಟೆ ಶ್ರೀ ಮಹಾಗಣಪತಿ ದೇವಾಲಯದ ವಾರ್ಷಿಕೋತ್ಸವವು ಜೂ.27 ರಂದು ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಜೂ.27 ರಂದು ಬೆಳಿಗ್ಗೆ 8 ಗಂಟೆಗೆ ಸ್ವಸ್ತಿ ಶ್ರೀ ಪುಣ್ಯಾಹವಾಚನ, 48 ತೆಂಗಿನಕಾಯಿ ಗಣಹೋಮ, 28 ಕಲಶ ಪೂಜೆ, ಶ್ರೀ ಗಣಪತಿಗೆ ಕಲಷಾಭಿಷೇಕ ದುರ್ಗಾಹೋಮ, ಶ್ರೀ ಕೃಷ್ಣ ಮಂತ್ರ ಹೋಮ, ಮಹಾಪೂಜೆ ಹಾಗೂ ತೀರ್ಥ ಪ್ರಸಾದ ವಿನಿಯೋಗ ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ 6.3 ರಿಂದ ದುರ್ಗಾಪೂಜೆ, ರಂಗಪೂಜೆ, ಮಹಾಪೂಜೆಯೊಂದಿಗೆ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗೊಳಿಸಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.










