ಮಡಿಕೇರಿ ಜೂ.24 : ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಗೆ ಜಿಲ್ಲಾಡಳಿತ ವತಿಯಿಂದ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ನಗರದಲ್ಲಿ ನಡೆದ ಸರಳ ಬೀಳ್ಕೊಡುಗೆ ಸಮಾರಂಭದಲ್ಲಿ ಡಾ.ಬಿ.ಸಿ.ಸತೀಶ ಅವರಿಗೆ ಫಲಪುಷ್ಪ, ತಾಂಬೂಲ, ಶಾಲೂ ನೀಡಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ಒಂದು ಅವಕಾಶ, ಆ ನಿಟ್ಟಿನಲ್ಲಿ ಎಲ್ಲರ ಸಹಕಾರದಿಂದ ಹೆಚ್ಚಿನ ಕೆಲಸ ನಿರ್ವಹಿಸಲು ಸಾಧ್ಯವಾಯಿತು ಎಂದು ತಿಳಿಸಿದರು. ಕೊಡಗು ವಿಶೇಷ ಜಿಲ್ಲೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವುದು ವಿಶೇಷ ಅನುಭವ ಪಡೆದಂತೆ ಎಂದರು.
ವಿಧಾನಸಭಾ ಮತ್ತು ವಿಧಾನ ಪರಿಷತ್ ಚುನಾವಣೆ ಜೊತೆಗೆ ಹಲವು ಅಭಿವೃದ್ಧಿ ಕಾರ್ಯದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಲು ಪ್ರಯತ್ನಿಸಿದ್ದೇನೆ.
ಎಲ್ಲರ ಸಹಕಾರದಿಂದ ಸಾರ್ವಜನಿಕ ಕರ್ತವ್ಯವನ್ನು ನಿರ್ವಹಿಸಲು ಸಾಧ್ಯ ಎಂದು ಡಾ.ಬಿ.ಸಿ.ಸತೀಶ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮಾತನಾಡಿ ಜಿಲ್ಲಾಧಿಕಾರಿ ಅವರು ತಂಡದ ನಾಯಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆಗಳನ್ನು ಸುಲಭವಾಗಿ ಬಗೆ ಹರಿಸುತ್ತಿದ್ದರು ಎಂದು ಅವರು ಹೇಳಿದರು.
ನಿರ್ಗಮಿತ ಜಿಲ್ಲಾಧಿಕಾರಿ ಅವರ ಜೊತೆ ಕರ್ತವ್ಯ ನಿರ್ವಹಿಸಿರುವುದು ಒಂದು ಅನುಭವ. ಆ ನಿಟ್ಟಿನಲ್ಲಿ ಎಲ್ಲರ ಜೊತೆ ಉತ್ತಮ ಬಾಂಧವ್ಯ ಹೊಂದಿ ಕೆಲಸ ಮಾಡಿಸುತ್ತಿದ್ದರು ಎಂದು ಡಾ.ಎಸ್.ಆಕಾಶ್ ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಚುನಾವಣೆ ಸೇರಿದಂತೆ ಕಂದಾಯ ಇಲಾಖೆ ಕೆಲಸದಲ್ಲಿ ಜಾಗರುಕತೆಯಿಂದ ಕರ್ತವ್ಯ ನಿರ್ವಹಿಸುವುದನ್ನು ತಿಳಿಸಿದ್ದಾರೆ ಎಂದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ ರಾಜ್ ಅವರು ಮಾತನಾಡಿ ಡಾ.ಬಿ.ಸಿ.ಸತೀಶ ಅವರು ಸದಾ ಚಟುವಟಿಕೆಯಿಂದ ಕ್ರೀಯಾಶೀಲರಾಗಿ ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸುತ್ತಿದ್ದರು. ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ಜಿಲ್ಲಾಧಿಕಾರಿ ಕಚೇರಿಯ ಕಾನೂನು ಸಲಹೆಗಾರರಾದ ಲೋಕೇಶ ಕುಮಾರ್ ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಶ್ರದ್ದೆ, ಪರಿಶ್ರಮ ಮೆಚ್ಚುವಂತದ್ದು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಪ್ರತಿಯೊಬ್ಬರ ಹೆಸರು ಹೇಳಿ ಹೆಚ್ಚಿನ ವಿಶ್ವಾಸ ಪಡೆದು ಕಾರ್ಯ ನಿರ್ವಹಿಸುತ್ತಿದ್ದರು ಎಂದರು. ಐಟಿಡಿಪಿ ಅಧಿಕಾರಿ ಎಸ್.ಹೊನ್ನೆಗೌಡ ಅವರು ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರು ಆದಿವಾಸಿ ಜನರ ನಿವೇಶನಕ್ಕೆ ೮ ಸ್ಥಳಗಳಲ್ಲಿ ಜಾಗ ಒದಗಿಸಿದ್ದಾರೆ ಎಂದರು. ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ ಅವರು ಮಾತನಾಡಿ ಸರ್ಕಾರಿ ನೌಕರರ ಸಂಘಕ್ಕೆ ಜಾಗ ಒದಗಿಸಿದ್ದಾರೆ. ಜನಸಾಮಾನ್ಯರೊಂದಿಗೆ ಬೆರೆಯುತ್ತಿದ್ದ ಗುಣ ದೊಡ್ಡದು ಎಂದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಎಇಇ ಹೇಮಂತ್ ಕುಮಾರ್ ಅವರು ಪೌರಾಡಳಿತ ಇಲಾಖೆಯಲ್ಲಿನ ಸಿಬ್ಬಂದಿಗಳ ವೇತನ ಬಡ್ತಿಗೆ ಅವಕಾಶ ಮಾಡಿದ್ದಾರೆ ಎಂದು ಶ್ಲಾಘಿಸಿದರು. ತಹಶಿಲ್ದಾರರಾದ ಪ್ರಕಾಶ್ ಅವರು ಮಾತನಾಡಿ ಕುಶಾಲನಗರದಲ್ಲಿ ನೂತನ ತಾಲ್ಲೂಕು ಕಚೇರಿ ನಿರ್ಮಾಣಕ್ಕೆ ಜಾಗ ಒದಗಿಸಿದ್ದಾರೆ ಎಂದರು. ಪೌರಾಯುಕ್ತರಾದ ವಿಜಯ್ ಅವರು ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರು ಜನಾನುರಾಗಿಯಾಗಿದ್ದರು. ಸರಳತೆ ಹೊಂದಿದ್ದರು, ಸಾರ್ವಜನಿಕರಿಗೆ ಸ್ಪಂದಿಸುತ್ತಿದ್ದರು. ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸುತ್ತಿದ್ದರು ಎಂದು ಮೆಚ್ವುಗೆ ವ್ಯಕ್ತಪಡಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಅವರು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದ್ದಾರೆ ಎಂದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರ ಅವಧಿಯಲ್ಲಿ ಕಾಫಿ ಮೇಳ, ಮಾವು ಮೇಳ, ಜೇನು ಮೇಳ ಆಯೋಜಿಸಿ ಗಮನ ಸೆಳೆದಿದ್ದರು ಎಂದರು. ಸಾರ್ವಜನಿಕರ ಕುಂದು ಕೊರತೆಗಳನ್ನು ಜಿಲ್ಲಾಡಳಿತ ಭವನದ ಕಾರಿಡಾರ್‍ನಲ್ಲಿಯೇ ಆಲಿಸಿ ಸಲಹೆ, ಮಾರ್ಗದರ್ಶನ ಮಾಡುತ್ತಿದ್ದರು ಎಂದರು.
ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ ಅವರು ಎಲ್ಲರೊಂದಿಗೆ ಸಹಕಾರ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದ್ದರು ಎಂದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವು ಬಾದಾಮಿ ಅವರು ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರು ಕಡಿಮೆ ಅವಧಿಯಲ್ಲಿ ಹೆಚ್ಚಿನ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು. ಕೆಪಿಟಿಸಿಎಲ್ ಎಂಜಿನಿಯರ್ ಮಾದೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ತಹಶೀಲ್ದಾರರಾದ ಪ್ರಶಾಂತ್, ಶಿರಸ್ತೆದಾರರಾದ ಪ್ರಕಾಶ್, ಸತೀಶ್ ಇತರರು ಮಾತನಾಡಿದರು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯವರು ಇದ್ದರು.
Breaking News
- *ಬೇಟೋಳಿಯಲ್ಲಿ ಮಕ್ಕಳ ಗ್ರಾಮಸಭೆ*
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು-ಸಿದ್ದಾಪುರ ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*