ನಾಪೋಕ್ಲು ಜೂ.26 : ಪೋಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮನ್ವಯತೆಯಿಂದ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ಹೇಳಿದರು.
ಶಾಲೆಯ ಸಭಾಂಗಣದಲ್ಲಿ 2023-24ರ ಶೈಕ್ಷಣಿಕ ವರ್ಷದ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳನ್ನು ಪೋಷಕರು ಶಾಲೆಗೆ ದಾಖಲು ಮಾಡಿ ಸುಮ್ಮನಿರಬಾರದು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕು. ಶಿಕ್ಷಕರೊಡನೆ ನಿರಂತರ ಸಂಪರ್ಕದಲ್ಲಿದ್ದು ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಬೇಕು ಎಂದರು.
ಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹಾರಿ ಮಂದಣ್ಣ, ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಅಪ್ಪಣ್ಣ, ನಿವೃತ್ತ ಪ್ರಾಂಶುಪಾಲ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿದರು.
ಈ ಸಂದರ್ಭ ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕ ಮಕ್ಕಿ ಸುಬ್ರಮಣ್ಯ, ಕೊಂಬಂಡ ಗಣೇಶ, ಬೋಪ್ಪಂಡ ಕುಶಾಲಪ್ಪ, ಅಪ್ಪಾರಂಡ ಅಪ್ಪಯ್ಯ, ಬಿದ್ದಾಟಂಡ ಮುತ್ತಣ್ಣ, ನಾಯಕಂಡ ದೀಪಕ್ ಚಂಗಪ್ಪ, ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ ಉಪಸ್ಥಿತರಿದ್ದರು. ಪೋಷಕರು ಹಾಗೂ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶಿಕ್ಷಕಿ ಚಂದ್ರಕಲಾ ಮಹೇಶ್ ಸ್ವಾಗತಿಸಿ ಶೋಭಾ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು. ಭಗವತಿ ಪ್ರಸಾದ್ ವಿ.ಟಿ ವಂದಿಸಿದರು.
ವರದಿ : ದುಗ್ಗಳ ಸದಾನಂದ