ಮಡಿಕೇರಿ ಜೂ.26 : ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಿದ್ಧಿವಿನಾಯಕ ಯುವಕ ಮಿತ್ರ ಮಂಡಳಿಯ ನೂತನ ಅಧ್ಯಕ್ಷರಾಗಿ ರೇಣುಕಾ ಪ್ರಸಾದ್, ಉಪಾಧ್ಯಕ್ಷರಾಗಿ ಪುನೀತ್ ಆಯ್ಕೆಯಾದರು.
ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ 24ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಕಾರ್ಯದರ್ಶಿ ಸಂತೋಷ್, ಖಜಾಂಚಿ ನರೇಶ್ ಅವರನ್ನು ಪುನರ್ ಆಯ್ಕೆ ಮಾಡಲಾಯಿತು. ಉಪ ಖಜಾಂಚಿಯಾಗಿ ಲವ, ಸೋಮ್ ಮತ್ತು ದಿವಾಕರ್ ನೇಮಕಗೊಂಡರು.
ಅಲಂಕಾರ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್, ಉಪಾಧ್ಯಕ್ಷರಾಗಿ ಸುಮನ್ ಮತ್ತು ಲಿಖಿ(ಗುಡ್ಡೆ) ಆಯ್ಕೆಯಾದರು.
ಈ ಸಂದರ್ಭ ನೂತನ ಅಧ್ಯಕ್ಷ ರೇಣುಕಾ ಪ್ರಸಾದ್ ಮಾತನಾಡಿ, ಈ ಬಾರಿ ಗೌರಿ-ಗಣೇಶ ಉತ್ಸವವನ್ನು ಅದ್ಧೂರಿಯಾಗಿ ನಡೆಸಲು ಸರ್ವ ಸದಸ್ಯರ ಸಹಕಾರ ಕೋರಿದರು.
ಖಜಾಂಚಿ ನರೇಶ್ ಈ ವರ್ಷದ ಸದಸ್ಯತ್ವ ಶುಲ್ಕದ ಬಗ್ಗೆ ಚರ್ಚಿಸಿದರು.
ಎಲ್ಲಾ ಸದಸ್ಯರ ಸಹಕಾರ ಇದ್ದಲ್ಲಿ ಮಾತ್ರ ಈ ಬಾರಿಯೂ ಉತ್ತಮ ರೀತಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದರು.