ಮಡಿಕೇರಿ ಜೂ.26 : ಮಣಿಪುರ ರಾಜ್ಯದಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ರಿಶ್ಚಿಯನ್ ಘಟಕ ಜೂ.28 ರಂದು ಮಡಿಕೇರಿಯಲ್ಲಿ ನಡೆಸಲುದ್ದೇಶಿಸಿರುವ ಪ್ರತಿಭಟನೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬೆಂಬಲ ಸೂಚಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಕಾಂಗ್ರೆಸ್ ನ ಅಲ್ಪಸಂಖ್ಯಾತರ ವಿಭಾಗದ ಎಲ್ಲಾ ಘಟಕಗಳು ಪ್ರತಿಭಟನೆಗೆ ಬೆಂಬಲ ನೀಡಲಿವೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಮಣಿಪುರದಲ್ಲಿ ಚರ್ಚ್‍ಗಳ ಮೇಲೆ ದಾಳಿಯಾಗುತ್ತಿದೆ ಮತ್ತು ಕ್ರೈಸ್ತರನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕ್ರೈಸ್ತರು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಸೂಕ್ತ ರಕ್ಷಣೆ ನೀಡಬೇಕೆಂದು ಉಸ್ಮಾನ್ ಒತ್ತಾಯಿಸಿದ್ದಾರೆ.









