ವಿರಾಜಪೇಟೆ ಜೂ.26 : ಕಾರ್ಮಿಕರು ಸಂಘಟಿತರಾಗಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಜಿಲ್ಲಾ ಸಿಐಟಿಯು ಸಂಘಟನೆಯ ಮಾಜಿ ಅಧ್ಯಕ್ಷ ಡಾ.ದುರ್ಗಾಪ್ರಸಾದ್ ಹೇಳಿದರು.
ಸೆಂಟರ್ ಆಫ್ ಇಂಡಿಯನ್ ಟ್ರೆಡ್ ಯೂನಿಯನ್ ‘ಸಿಐಟಿಯು ಸಂಘಟನೆಯ 53ನೇ ಸಂಸ್ಥಾಪನಾ ದಿನಾಚರಣೆ’ ಅಂಗವಾಗಿ ಜಿಲ್ಲಾ ಸಂಘಟನೆ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
1970ರಲ್ಲಿ ಸಿಐಟಿಯು ಸಂಘಟನೆ ಸ್ಥಾಪನೆಗೊಂಡು ನಂತರ ಬ್ರಿಟಿಷರ ಅವಧಿಯಲ್ಲಿ ಕಾರ್ಮಿಕ ಸಂಘಟನೆ ಭಾರೀ ಚಳುವಳಿ ನಡೆದಿತ್ತು ಎಂದು ಸಂಘಟನೆ ನಡೆದುಬಂದ ದಾರಿ ಬಗ್ಗೆ ವಿವರಿಸಿದ ದುರ್ಗಾಪ್ರಸಾದ್, ಕಾರ್ಮಿಕರು ಒಂದು ದಿನದ ಬದುಕಿಗಾಗಿ ಹೋರಾಟ ನಡೆಸದೆ ಜೀವನದಲ್ಲಿ ನೆಮ್ಮದಿಯ ಬದುಕಿಗಾಗಿ ಹೊರಾಟ ನಡೆಸುವಂತಾಗಬೇಕು. ಬಂಡವಾಳ ಶಾಹಿಗಳ ಒಡೆತನ ಆಳ್ವಿಕೆ ಇಲ್ಲದೆ ಕಾರ್ಮಿಕರಿಗೆ ಕೈಗೆಟುಕುವಂತ ಆಡಳಿತದ ಅಗತ್ಯವಿದೆ ಎಂದರು.
ಸಿಐಟಿಯು ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಕಟ್ಟಡ ಕಾರ್ಮಿಕರು, ಬಿಸಿಯೂಟ ನೌಕರರ ಸಂಘ, ಗ್ರಾ.ಪಂ ನೌಕರರ ಸಂಘ, ಅಂಗನವಾಡಿ ನೌಕರರು ಸೇರಿದಂತೆ ರಾಜ್ಯದಲ್ಲಿ 185 ಕಾರ್ಮಿಕ ಸಂಘಟನೆಗಳು ಸಿಐಟಿಯುನ ಒಂದು ಭಾಗವಾಗಿ ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಿಸಲು ಮುಂದಾಗಿದೆ. ಕೊಡಗು ಜಿಲ್ಲೆಯಲ್ಲಿ 5 ಲಕ್ಷ ಕಾರ್ಮಿಕರಿದ್ದು ಸಂಘಟನೆ ಮೂಲಕ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.
ಸಿಐಟಿಯು ಸಂಘಟನೆಯ ಜಿಲ್ಲಾ ಖಜಾಂಚಿ ಎನ್.ಡಿ.ಕುಟ್ಟಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕರು ಸಂಘಟನೆ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ಕಾರ್ಮಿಕ ಸಂಘಟನೆಗಳ ಹೋರಾಟ ಸಿಐಟಿಯು ಸಂಘಟನೆಯ ಭಾಗವಾಗಿದೆ. ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಹೋರಾಟದ ಅನಿವಾರ್ಯತೆ ಇದ್ದು, ಕಾರ್ಮಿಕರು ಸಂಘಟಿತರಾಗುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಿಲ್ಲಾ ಉಪ ನಿರ್ಧೇಶಕ ಡಾ.ಬಾಲರಾಜ್ ರಂಗರಾವ್ ಮಾತನಾಡಿ, ಕೃಷಿ ಇಲಾಖೆಯ ರೈತ ವಿದ್ಯಾನಿಧಿಯಿಂದ 8-9-10ನೇ ತರಗತಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ಸಭೆಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಸಿಯೂಟ ಸಂಘಟನೆಯ ಕಾರ್ಯದರ್ಶಿ ಕುಸುಮ, ಸೊಮವಾರಪೇಟೆಯ ಚಾಮುಂಡಿ, ಅಂಗನವಾಡಿ ನೌಕರರ ಸಂಘದ ವಿರಾಜಪೇಟೆ ತಾಲೂಕು ಅಧ್ಯಕ್ಷೆ ಶೀಲ, ಪೊನ್ನಂಪೇಟೆಯ ಸುಮಿತ್ರಾ, ಸೋಮವಾರಪೇಟೆಯ ಸಾವಿತ್ರಿ, ಪ್ಲಂಟೆಷನ್ ಕಾರ್ಮಿಕ ಸಂಘಟನೆ ಅಧ್ಯಕ್ಷೆ ಪುಷ್ಪ, ಜನರಲ್ ವರ್ಕರ್ಸ್ ಯೂನಿಯನ್ ಉಪ ಕಾರ್ಯದರ್ಶಿ ರಾಚಪ್ಪಾಜಿ, ಹಮಾಲಿ ಕಾರ್ಮಿಕ ಸಂಘದ ಕಾರ್ಯದರ್ಶಿ ಶಾಜಿ ರಮೇಶ್, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಸಂಘಟನೆಯ ಕಾರ್ಯಕರ್ತರು ಹಾಜರಿದ್ದರು.
Breaking News
- *ಕೊಡಗು ಔಷಧಿ ವ್ಯಾಪಾರಿಗಳ ಸಂಘದಿಂದ ರಕ್ತಸಂಗ್ರಹಣಾ ಶಿಬಿರ : ಔಷಧೀಯ ಅಂಶ ಹೊಂದಿರವ ರಕ್ತದ ದಾನಕ್ಕೆ ಸವ೯ರೂ ಮುಂದಾಗಿ : ಗುರುನಾಥ್ ಕರೆ*
- *ಬೇಟೋಳಿಯಲ್ಲಿ ಮಕ್ಕಳ ಗ್ರಾಮಸಭೆ*
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು-ಸಿದ್ದಾಪುರ ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*