ಮಡಿಕೇರಿ ಜೂ.27 : ಪೊನ್ನಂಪೇಟೆ ತಾಲ್ಲೂಕು ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿಯಿಂದ ಹಸುವೊಂದು ಬಲಿಯಾದ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ಬಲ್ಲಿಮಾಡ ಸಂಪತ್ ಅವರಿಗೆ ಸೇರಿದ ಹಸು ಇದಾಗಿದ್ದು, ಕಳೇಬರ ಕಾಫಿ ತೋಟದಲ್ಲಿ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ಹಸುವನ್ನು ಹುಡುಕುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊನ್ನಂಪೇಟೆ ವಿಭಾಗದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದಲ್ಲಿ ಆತಂಕ ಮೂಡಿಸಿರುವ ಹುಲಿಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.










