ಮಡಿಕೇರಿ ಜೂ.27 : ಕುಶಾಲನಗರದ ಶಾರದಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಾಂತ ಶ್ರೀಪತಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನಿಂದ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದೊಡ್ಡಬಳ್ಳಾಪುರದಲ್ಲಿ ತೋಟಂದಾರ್ಯ ಮಠದ ನಿಜಗುಣ ಪ್ರಭು ಸ್ವಾಮೀಜಿ ಸಾನ್ವಿಧ್ಯದಲ್ಲಿ ನಡೆದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಪರಿಷತ್ತು ರಾಜ್ಯ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.