ಹಾಸನ ಜೂ.27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಡಿನ ಜನತೆಗೆ ಶುಭ ಕೋರಿದರು.
ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶಾಸಕಕೆ.ಎಂ.ಶಿವಲಿಂಗೇಗೌಡ, ಸಿ.ಎನ್ ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಹೆಚ್.ಕೆ.ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳ ಮತ್ತಿತರರು ಹಾಜರಿದ್ದರು.







