ಮಡಿಕೇರಿ ಜೂ.27 : ದಕ್ಷಿಣ ಕನ್ನಡದ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಹಿಂದೂ ಪರ ಸಂಘಟನೆಯ ಪ್ರಮುಖ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಎನ್ ಐಎ ಅಧಿಕಾರಿಗಳು ಇಂದು ತನಿಖೆ ನಡೆಸಿದರು ಎಂದು ತಿಳಿದು ಬಂದಿದೆ.
ಸೋಮವಾರಪೇಟೆಯ ಕನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಭಾಗದಲ್ಲಿ ಇಬ್ಬರು ವ್ಯಕ್ತಿಗಳ ಮನೆಗೆ ಇಂದು ಬೆಳಿಗ್ಗೆ ದಾಳಿ ಮಾಡಿದ ಅಧಿಕಾರಿಗಳು ಕೆಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಹೇಳಲಾಗಿದೆ. ಈ ವ್ಯಕ್ತಿಗಳಿಬ್ಬರು ದುಬೈಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.







