ಮಡಿಕೇರಿ ಜೂ.27 : ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಕಾಣಿಸಿಕೊಂಡ ಅರಕಲಗೂಡು ಶಾಸಕ, ಕರ್ನಾಟಕ ರಾಜ್ಯ ಕೃಷಿ ಸಹಕಾರ ಮಂಡಲದ ನಿರ್ದೇಶಕ ಎ.ಮಂಜು, ವೇದಿಕೆಯ ಮೇಲೆ ಹೋಗಿ ಮಡಿಕೇರಿ ಶಾಸಕ, ಪುತ್ರ ಡಾ.ಮಂತರ್ ಗೌಡ ಅವರ ಬೆನ್ನು ತಟ್ಟಿ ವಿಶ್ ಮಾಡಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.









