ಮಡಿಕೇರಿ ಜೂ.27 : ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿ ಮಳೆಗಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಕಾವೇರಿಗೆ ಸಂಕಲ್ಪ ಕುಂಕುಮಾರ್ಚನೆ ಮೂಲಕ ವಿಶೇಷ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ನೆರವೇರಿಸಿದರು.
ನಾಡಿನಲ್ಲಿ ಉತ್ತಮ ಮಳೆಯಾಗಿ ಸುಭೀಕ್ಷೆ ತರುವಂತಾಗಬೇಕು. ಹೆಚ್ಚಿನ ಮಳೆಯಿಂದ ಕೃಷಿ ಚಟುವಟಿಕೆ ಗರಿಗೆದರಬೇಕು. ಉತ್ತಮ ಮಳೆಯಾಗಿ ಆಹಾರ ಬೆಲೆಗಳು ಇಳಿಕೆ ಆಗಬೇಕು ಎಂದು ಸಚಿವರು ವಿಶೇಷ ಪ್ರಾಥನೆ ಸಲ್ಲಿಸಿದರು.
ಇದೇ ಮೊದಲ ಬಾರಿಗೆ ತಲಕಾವೇರಿಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧವಾಗಲಿ ಎಂದು ತಾಯಿ ಕಾವೇರಿ ಮಾತೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಶಾಸಕ ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಇತರರು ಇದ್ದರು.
Breaking News
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*