ಮಡಿಕೇರಿ ಜೂ.28 : ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮವು ಶ್ರೀ ಶಕ್ತಿ ಅಸೋಷಿಯೇಷನ್, ಶಕ್ತಿದಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ, ಜ್ಞಾನ ಕಾವೇರಿ, ಚಿಕ್ಕಅಳುವಾರ, ಕೊಡಗು ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆಯಿತು.
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಯುವಕರು ವ್ಯಸನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಮಕ್ಕಳಲ್ಲಿ ಯುವಕ ಯುವತಿಯರಲ್ಲಿ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕಾಗಿದೆ. ಹಾಗೂ ಸಮಾಜದಲ್ಲಿ ತುಂಬಾ ವ್ಯಸನಕ್ಕೆ ಒಳಗಾದವರನ್ನು ಶಕ್ತಿಧಾಮ ಕೇಂದ್ರಕ್ಕೆ ದಾಖಲಿಸಿ ವ್ಯಸನಮುಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರು.
ಕೂಡ್ಲೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪಿ.ಮೋಹನ್‍ರಾಜು ಅವರು ಮಾತನಾಡಿ ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳು ಬೀರುತ್ತದೆ. ಯುವಕ ಯುವತಿಯರು ಆಕರ್ಷಣೆ ಫ್ಯಾಸನ್, ಮೋಜು ಮಸ್ತಿಗಾಗಿ ಈ ವಸ್ತುಗಳ ಸೇವನೆಗೆ ಹೆಚ್ಚಾಗಿ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಾಗೂ ನಗರ ಪ್ರದೇಶಗಳಲ್ಲಿ ಗಾಂಜ ವ್ಯಸನಿಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇಂತಹ ವ್ಯಸನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಪೊಲೀಸ್ ಇಲಾಖೆ ಮತ್ತು ಕಾಯ್ದೆಗಳ ಬಗ್ಗೆ ವಿವರಿಸಿದರು.
ಕುಶಾಲನಗರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಪ್ರಾಣೇಶ್ ಅವರು ಮಾತನಾಡಿ ಪ್ರತಿಯೊಬ್ಬ ಮನುಷ್ಯನ ಜೀವನದ ತಳಪಾಯ ಮನಸು ಆತ್ಮವು ಒಂದು ಬೆಳಕಿನ ಬಿಂದು ಆಗಿರುತ್ತದೆ. ಅತಿಯಾಗಿ ಯೋಚಿಸುವುದರಿಂದ ಮೆದುಳಿಗೆ ಹಾನಿಯಾಗುತ್ತದೆ. ದ್ಯಾನ ಮಾಡುವುದರಿಂದ ಶಾಂತಿ ಸಮದಾನ ಪವಿತ್ರತೆ ಸುಖ ಶಕ್ತಿ ಲಭಿಸುತ್ತದೆ. ವ್ಯವಸನಿಗಳು ವ್ಯಸನ ಮುಕ್ತರಾಗಲು ಧ್ಯಾನ ಮತ್ತು ಆಧ್ಯಾತ್ಮಿಕ ಚಿಂತನೆಗಳ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಹರಿಣಾಕ್ಷಿ ಕೆ., ನಟರಾಜ್, ಶಕ್ತಿಧಾಮದ ಯೋಜನಾ ನಿರ್ದೇಶಕರಾದ ಪ್ರಭು ಕೆ.ಒ. ವೈದ್ಯಾಧಿಕಾರಿ ಡಾ. ಭರತ್ ಉಪಸ್ಥಿತರಿದ್ದರು.
Breaking News
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*