ಮಡಿಕೇರಿ ಜೂ.28 : ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಅರಕಲಗೋಡು ತಾಲ್ಲೂಕು ದಡ್ಡದಳ್ಳಿ ಗ್ರಾಮದ ನಿವಾಸಿ ಮಂಜು ಮಂಜುನಾಥ್ (25) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ ಶನಿವಾರಸಂತೆ ಹಾಗೂ ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಗ್ಗೆ ದೂರು ಬಂದಿದ್ದ ಹಿನ್ನೆಲೆ ಪೊಲೀಸರು ಆರೋಪಿಯ ಪತ್ತೆಗಾಗಿ ತನಿಖೆ ಕೈಗೊಂಡಿದ್ದರು.
ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ಪಿ.ಗಂಗಾಧರಪ್ಪ ಹಾಗೂ ಶನಿವಾರಸಂತೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಪರಶಿವಮೂರ್ತಿ.ಎಸ್ ಅವರು ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
::: ಮಾಹಿತಿ ನೀಡಿ :::
ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಜಿಲ್ಲಾ ಪೊಲೀಸ್ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮತ್ತು ಅಕ್ರಮ ಚಟುವಟುಕೆಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.
Breaking News
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*