ಮಡಿಕೇರಿ ಜೂ.28 : ಪ್ರಕೃತಿಯ ಬಗ್ಗೆ ಮಕ್ಕಳಿಗೆ ಕಾಳಜಿ ಮತ್ತು ಪ್ರೀತಿ ಹೆಚ್ಚಾಗಬೇಕಾದರೆ ವರ್ಷಕ್ಕೊಮ್ಮೆಯಾದರೂ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಅರಣ್ಯ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಕಾಡು ಪರಿಚಯಿಸುವ ಕೆಲಸವಾಗಬೇಕು ಎಂದು ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು.
ವಿರಾಜಪೇಟೆ ತಾಲ್ಲೋಕು ಪತ್ರಕರ್ತರ ಸಂಘದ ವತಿಯಿಂದ ನಗರದ ಕಾವೇರಿ ಕಾಲೇಜಿನಲ್ಲಿ ಏರ್ಡಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತವಾದ ಶಕ್ತಿ. ಇಂದಿನ ಯುವಜನತೆ ಪ್ರಕೃತಿಯ ಮಹತ್ವವನ್ನು ಚೆನ್ನಾಗಿ ಅರಿಯಬೇಕು. 1950 ರ ಸುಮಾರಿಗೆ ಮುನ್ಷಿಯವರು ವನಮಹೋತ್ಸವ ಕಾರ್ಯಕ್ರಮವನ್ನು ಆರಂಭ ಮಾಡಿದರು. ಮಳೆಗಾಲದ ಆರಂಭದಲ್ಲಿ ಗಿಡಗಳನ್ನು ನೆಡುವುದರಿಂದ ಚೆನ್ನಾಗಿ ಬೆಳೆದು ಪ್ರಕೃತಿಯ ಶಕ್ತಿಯನ್ನು ಹೆಚ್ಚಿಸುತ್ತವೆ. ಕಾಡು ಇಂದು ಅಲ್ಪಪ್ರಮಾಣದಲ್ಲಿ ನಮ್ಮ ನಡುವೆ ಇದೆ. ಮಕ್ಕಳಿಗೆ ಕಾಡಿನ ಬಗ್ಗೆ ಆಸಕ್ತಿ ಮೂಡಿಸುವುದರಿಂದ ಭವಿಷ್ಯದಲ್ಲಿ ನಾವು ಪ್ರಕೃತಿಯ ರಕ್ಷಣೆಯ ಹೊಣೆಗಾರಿಕೆಯನ್ನು ಅವರಿಗೆ ಕಲಿಸಬಹುದು ಎಂದು ಅಭಿಪ್ರಾಯಪಟ್ಟರು.
ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಮಧುಕುಮಾರ್ ಮಾತನಾಡಿ, ವನಮಹೋತ್ಸವವನ್ನು ಹಮ್ಮಿಕೊಳ್ಳುವುದರ ಹಿಂದೆ ಪ್ರಕೃತಿಗೆ ವರದಾನವಾಗಬಲ್ಲ ಸಾಕಷ್ಟು ವಿಚಾರಗಳಿವೆ. ಪ್ರಕೃತಿಗೆ ಎಂದಿಗೂ ಮೋನೋಕಲ್ಚರ್ ಕಾಡುಗಳಿಂದ ಯಾವ ಉಪಯೋಗವೂ ಆಗುವುದಿಲ್ಲ. ವೈವಿಧ್ಯತೆಯಿಂದ ಕೂಡಿದ ಮರಗಿಡಗಳು ಆಹಾರ ಸರಪಳಿಯ ಪ್ರತಿಯೊಂದು ಜೀವಿಗೂ ಒಂದಿಲ್ಲ ಒಂದು ಬಗೆಯಲ್ಲಿ ಸಹಾಯ ಮಾಡುತ್ತವೆ. ನಾವೂ ಮನೆಯ ಪಕ್ಕ ನೆಟ್ಟು ಪೋಷಣೆ ಮಾಡುವ ಒಂದು ಗಿಡ ಪ್ರಕೃತಿಗೆ ಅನೇಕ ರೀತಿಯಲ್ಲಿ ಸಹಾಯಕ್ಕೆ ಬರುತ್ತದೆ ಎಂದರು.
ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಮಾತನಾಡಿ, ಪ್ರಕೃತಿ ಸಂರಕ್ಷಣೆಯಲ್ಲಿ ಎಲ್ಲರೂ ಕೈಜೋಡಿಸಬೇಕು. ಪ್ರಕೃತಿಯನ್ನು ಬಳಸಿಕೊಳ್ಳುವಿಕೆಯಲ್ಲಿ ಮತ್ತು ಉಳಿಸುವಿಕೆಯಲ್ಲಿ ನಮ್ಮ ಜವಾಬ್ದಾರಿತನದ ಪ್ರದರ್ಶನವಾಗಬೇಕು ಎಂದು ಅಭಿಪ್ರಾಯಪಟ್ಟರು.
ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಧೋಶ್ ಪೂವಯ್ಯ ಮಾತನಾಡಿ, ಪರಿಸರ ಚೆನ್ನಾಗಿ ಇರಬೇಕಾದರೆ ನಾವೂ ಇರುವ ಭೂಮಿಯ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು. ಅದಕ್ಕಾಗಿ ನಾವೂ ಗಿಡ-ಮರ ಬೆಳೆಸುವ ಮೂಲಕ ಭೂಮಿಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭಾ ಕಾರ್ಯಕ್ರಮದ ಬಳಿಕ ಅತಿಥಿ ಗಣ್ಯರು ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ವಿದ್ಯಾರ್ಥಿಗಳ ಜೊತೆ ಸೇರಿ ನೆಟ್ಟರು. ಕಾರ್ಯಕ್ರಮದ ವೇದಿಕೆಯಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲ ಆನಂದ್ ಕಾರ್ಲ ಉಪಸ್ಥಿತರಿದ್ದರು. ಉಪನ್ಯಾಸಕಿ ವೀಣಾ ರವೀಂದ್ರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ರಾಜೇಶ್ ಪದ್ಮನಾಭ, ಪ್ರಧಾನ ಕಾರ್ಯದರ್ಶಿ ಉಷಾ ಪ್ರೀತಮ್, ನಿರ್ದೇಶಕರುಗಳಾದ ಯುವರಾಜ್ ಕೃಷ್ಣ, ಹೇಮಂತ್ ತೊರೇರ ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*