ಮಡಿಕೇರಿ ಜೂ.28 : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೆ ತರುವಂತಹ ಪತ್ರಗಳು, ಅರೆ ಸರ್ಕಾರಿ ಪತ್ರಗಳು, ಇನ್ನಿತರ ಯಾವುದೇ ಮುಖ್ಯವಾದ ಪತ್ರಗಳನ್ನು ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಕೆಎಸ್ಆರ್ಟಿಸಿ ಬಸ್ ಡಿಪೋ ಹತ್ತಿರ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ತಿಳಿಸಿದ್ದಾರೆ.









