ಮಡಿಕೇರಿ ಜೂ.29 : ವಿರಾಜಪೇಟೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಾಸಗಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ವಿರಾಜಪೇಟೆ ಸುಂಕದಕಟ್ಟೆ ನಿವಾಸಿಗಳಾದ ಎಸ್.ಹರೀಶ್ (48), ಎಸ್.ಸಂತೋಷ್ (39) ಹಾಗೂ ಎಸ್.ಪಿ.ದಿಕ್ಷೀತ್ (23) ಎಂಬುವವರನ್ನು 127 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದರು.
ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರ, ಪಿಎಸ್‌ಐ ಶ್ರೀಧರ್.ಸಿ.ಎ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
::: ಮಾಹಿತಿ ನೀಡಿ :::
ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Breaking News
- *71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ : ಹಿರಿಯರ ದೂರದೃಷ್ಟಿಯಿಂದ ಜಿಲ್ಲೆಯ ಸಹಕಾರ ಸಂಘಗಳು ಬಲಿಷ್ಠ : ಎ.ಕೆ.ಮನುಮುತ್ತಪ್ಪ*
- ಕೊಡಗು : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ : ಪುಸ್ತಕ ಅಧ್ಯಯನದಿಂದ ಜ್ಞಾನ ವೃದ್ಧಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
- *ಮಡಿಕೇರಿಯಲ್ಲಿ ನವಜಾತ ಶಿಶು ಆರೈಕೆ ಸಪ್ತಾಹ : ನವಜಾತ ಶಿಶುವಿನ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಿ : ಡಾ.ಮಧುಸೂಧನ್*
- *ಬಿಜೆಪಿಯಿಂದ ದಿನಪೂರ್ತಿ ಧರಣಿ ಸತ್ಯಾಗ್ರಹ*
- *ರಾಜ್ಯ ಸರ್ಕಾರದ ವಿರುದ್ಧ ಜನ ಜಾಗೃತರಾಗಬೇಕು : ಕೊಡಗು ಬಿಜೆಪಿ ಎಸ್ಟಿ ಮೋರ್ಚಾ ಕರೆ*
- *ನ.22 ರಂದು ವಿಶೇಷ ಚೇತನರಿಗೆ ಆಟೋಟ ಸ್ಪರ್ಧೆ*
- *“ತೋಕ್ ನಮ್ಮೆ” ಪ್ರಯುಕ್ತ ರಾಜ್ಯ ಮಟ್ಟದ “ಕೋಕನಟ್ ಶೂಟಿಂಗ್”*
- *ತೋಳೂರು ಶೆಟ್ಟಳ್ಳಿಯಲ್ಲಿ “ಶರಣ ಸಂಸ್ಕೃತಿ” ವಿಚಾರಗೋಷ್ಠಿ : ವಚನಗಳು ಸುಂದರ ಜೀವನದ ದೀವಿಗೆಗಳು : ಮೆ.ನಾ.ವೆಂಕಟನಾಯಕ್ ಅಭಿಮತ*
- *ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ : ವಿರಾಜಪೇಟೆ ರೋಟರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿ : ಮೂರ್ನಾಡು ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್*