ಮಡಿಕೇರಿ ಜೂ.30 : ಭಿನ್ನಮತಗಳನ್ನು ಬದಿಗೊತ್ತಿ ಎಲ್ಲರೂ ಒಗ್ಗಟ್ಟಿನಿಂದ ಜನಪರವಾಗಿ ನಗರದ ಅಭಿವೃದ್ಧಿಗೆ ಶ್ರಮಿಸೋಣವೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ.
ಮಡಿಕೇರಿ ನಗರಸಭೆಯಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳೋಣವೆಂದರು.
ಸಭೆಯಲ್ಲಿ ವಾಗ್ವಾದ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ, ಬದಲಿಗೆ ನೈಜಾಂಶವನ್ನು ಅರಿತು ಸಮಸ್ಯೆಯನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಹೇಳಿದರು.
ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡವುದಾಗಿ ಭರವಸೆ ನೀಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ, ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷ ಎಸ್‌ಡಿಪಿಐ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ಏಲಕ್ಕಿ ಬೆಳೆಗಾರರಿಗೂ ಬಂತು ಶುಕ್ರದೆಸೆ : ಮಾರ್ಚ್ ವೇಳೆಗೆ ಕಿಲೋ ಗೆ 3500 ರೂ ತಲುಪಲಿದೆ*
- *ಬಲ್ಲಮಾವಟಿಯಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ : ಕಟ್ಟೆಮಾಡು ಬ್ಯಾಕ್ ಈಗಲ್ಸ್ ತಂಡ ಚಾಂಪಿಯನ್*
- *ನಿಧನ ಸುದ್ದಿ*
- *ಚೆಟ್ಟಳ್ಳಿಯಲ್ಲಿ ಜೇನುಕೃಷಿ ತರಬೇತಿ ಕಾರ್ಯಾಗಾರ*
- *ಕೊಳಕೇರಿ : ಸಹಕಾರ ದವಸ ಭಂಡಾರವು ಸಹಕಾರ ಸಪ್ತಾಹ ಆಚರಣೆ ಮಾಡುತ್ತಿರುವುದು ಶ್ಲಾಘನೀಯ : ಎ.ಕೆ.ಮನು ಮುತ್ತಪ್ಪ*
- *ಮಿನಿ ಒಲಿಂಪಿಕ್ಸ್ ಫುಟ್ಬಾಲ್: ಕೊಡಗು ಬಾಲಕರ ತಂಡ ರನ್ನರ್ಸ್*
- *ಬಲ್ಲಮಾವಟಿಯಲ್ಲಿ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*
- *ಕೊಡಗಿನ ಬಸವೇಶ್ವರ, ಪೇಟೆ ರಾಮ ಮಂದಿರ, ವಿಜಯ ವಿನಾಯಕ ದೇವಾಲಯಗಳಲ್ಲಿ ಕಳ್ಳತನ : ಅಂತರ್ ಜಿಲ್ಲಾ ಆರೋಪಿಯ ಬಂಧನ*
- *ಕನಕದಾಸರು ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು : ಶಾಸಕ ಡಾ.ಮಂತರ್ ಗೌಡ*
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*