ಮಡಿಕೇರಿ ಜೂ.30 : ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ ತಾಲೂಕು ಒಕ್ಕೂಟದಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಅಭಿನಂದಿಸಲಾಯಿತು.
ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್, ತಾಲೂಕು ಯುವ ಒಕ್ಕೂಟ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ಸೇರಿದಂತೆ ಪ್ರಮುಖರು ಶಾಸಕರಿಗೆ ಹೂವುಗುಚ್ಛ ನೀಡಿ ಅಭಿನಂದಿಸಿ, ಜಿಲ್ಲಾ ಯುವ ಚಟುವಟಿಕೆಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.
ಯುವ ಒಕ್ಕೂಟದ ಎಲ್ಲ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವದಾಗಿ ಶಾಸಕ ಮಂಥರ್ ಗೌಡ ನಿಯೋಗಕ್ಕೆ ಭರವಸೆ ನೀಡಿದರು.
ಈ ಸಂದರ್ಭ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಕೆ.ಪ್ರಮೋದ್ ಗಣಪತಿ, ಮಡಿಕೇರಿ ತಾಲೂಕು ಯುವ ಒಕ್ಕೂಟ ಕಾರ್ಯಕಾರಿ ಸದಸ್ಯರಾದ ಜಯಕುಮಾರ್, ನಿಖಿಲ್ ಬೆಳಿಯ್ಯಪ್ಪ, ಇಂದುಮತಿ, ಮದನ್ ಹಾಗೂ ಸದಸ್ಯರು ಹಾಜರಿದ್ದರು.