ಮಡಿಕೇರಿ ಜೂ.30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಮಟ್ಟದಲ್ಲಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಹೊರತಂದಿರುವ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಬಿಡುಗಡೆ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆ ಮಾಡಿ ಜಿಲ್ಲಾ ಮಟ್ಟದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಚಟುವಟಿಕೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಕ್ಕಳು ಸ್ವಚ್ಛತೆ, ಪರಿಸರ ಹೀಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇ ಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಗೈಡ್ಸ್ ಆಯುಕ್ತರಾದ ರಾಣಿ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಅಜ್ಜಮಕ್ಕಡ ವಿನು ಕುಮಾರ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ, ಸ್ಕೌಟರ್ ಕುಟ್ಟಪ್ಪ ಇತರರು ಇದ್ದರು.








