ಮಡಿಕೇರಿ ಜೂ.30 : ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಜು.1 ರಂದು ಮಧ್ಯಾಹ್ನ 12.30 ಯಿಂದ 01.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಜು.1 ರಂದು ಮಧ್ಯಾಹ್ನ 4 ರಿಂದ 05 ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.
Breaking News
- *ಬ್ರಹ್ಮಗಿರಿ ಸಹೋದಯ ಅಥ್ಲೆಟಿಕ್ಸ್ : ಕೊಡಗು ವಿದ್ಯಾಲಯಕ್ಕೆ ಚಾಂಪಿಯನ್ ಪಟ್ಟ*
- *ಕನಕದಾಸರಿಗೆ ಗೌರವ ಅರ್ಪಿಸಿದ ಸಿಎಂ*
- *ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಮಡಿಕೇರಿ : ಕನ್ನಡ ಅನ್ನದ ಭಾಷೆಯಾಗಬೇಕು : ವೆಂಕಟೇಶ ಪ್ರಸನ್ನ*
- *ಸೋಮವಾರಪೇಟೆ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪ್ರದೀಪ್ ಪುನರಾಯ್ಕೆ*
- *ಹೊನ್ನಮ್ಮನ ಕೆರೆ ದೇವಾಲಯದಲ್ಲಿ ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ ಕಾರ್ಯಕ್ರಮ*
- *ಅಜಿಲ ಯಾನೆ ನಲಿಕೆ ಸಮಾಜ ಸೇವಾ ಸಮಿತಿಯ 9ನೇ ವಾರ್ಷಿಕೋತ್ಸವ : ಸಾಧಕರಿಗೆ ಸನ್ಮಾನ*
- *ಮಿನಿ ಒಲಿಂಪಿಕ್ಸ್ ಫುಟ್ಬಾಲ್ : ಫೈನಲ್ ಗೆ ಆಯ್ಕೆಯಾದ ಕೊಡಗು ಬಾಲಕರ ತಂಡ*
- *ಎಸ್.ಕೆ.ಎಸ್.ಎಸ್.ಎಫ್ ಸಿದ್ದಾಪುರ ವಲಯ ಮಟ್ಟದ ಇಸ್ಲಾಮಿಕ್ ಕಲೋತ್ಸವ : ಸಿದ್ದಾಪುರ ಯೂನಿಟ್ ಚಾಂಪಿಯನ್ಸ್*
- ಕರ್ನಾಟಕ ತಂಡದ ನಾಯಕಿಯಾಗಿ ಕೊಡಗು ವಿದ್ಯಾಲಯದ ಪರ್ಲಿನ್ ಪೊನ್ನಮ್ಮ