ಮಡಿಕೇರಿ ಜೂ.30 : ಜಿಲ್ಲಾಡಳಿತ, ಎನ್‍ಡಿಆರ್‍ಎಫ್ ತಂಡ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ, 1 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕಿನ ಕೆ.ನಿಡುಗಣೆ ಪಂಚಾಯತ್ ವ್ಯಾಪ್ತಿಯ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಅಣಕು ಕಾರ್ಯಾಚರಣೆ ನಡೆಯಲಿದೆ.
ಆದ್ದರಿಂದ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ (ಕುಮಾರಸ್ವಾಮಿ ಬಡಾವಣೆಗೆ ಹೋಗುವ ರಸ್ತೆ) ನಡೆಯುವ ಅಣಕು ಕಾರ್ಯಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ.










