ಸುಂಟಿಕೊಪ್ಪ ಜು.1 : ಚಾಲಕ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಮಾದಾಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಸುಂಟಿಕೊಪ್ಪದಿಂದ ಮಾದಾಪುರದ ಕಡೆಗೆ ತೆರಳುತ್ತಿದ್ದ ಕಾರು ಸ್ವಸ್ಥ ಪುನರ್ವಸತಿ ಕೇಂದ್ರದ ಸಮೀಪ ಚಾಲಕನ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಕಾರಿನ ಚಾಲಕ ಹಾಗೂ ಸಹ ಪ್ರಯಾಣಿಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಪಲ್ಟಿಯಾ ರಬ್ಬಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.









