ಮಡಿಕೇರಿ ಜು.1 : ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕೆಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಟಿ.ಕೆ. ಸಾಯಿ ಕುಮಾರ್ ಸಲಹೆ ನೀಡಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ವತಿಯಿಂದ ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಿಕೆಗಳಿಂದ ದೈನಂದಿನ ಆಗುಹೋಗುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ. ಸಂಕ್ಷಿಪ್ತವಾಗಿ ಪತ್ರಿಕಾ ದಿನಾಚರಣೆಯ ಇತಿಹಾಸವನ್ನು ಸ್ಮರಿಸಿದ ಅವರು ಪತ್ರಿಕೆಗಳು ಸದಾ ಕಾಲವೂ ಸಮಾಜಕ್ಕೆ ಪ್ರತಿಸ್ಪಂದಿಸುವ ಕೆಲಸವನ್ನು ಮಾಡುತ್ತಲೇ ಬಂದಿರುವುದನ್ನು ಕಾರಣಬಹುದಾಗಿದೆ. ಇಂದಿನ ಮಕ್ಕಳು ಪತ್ರಿಕೆಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ತಮ್ಮ ತಂದೆ ಮತ್ತು ತಾಯಿ ಹೆಸರಿನಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘಕ್ಕೆ ದತ್ತಿನಿಧಿ ಘೋಷಣೆ ಮಾಡಿದರು.
ಮುಖ್ಯ ಭಾಷಣಕಾರಾಗಿ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ ಮಾತನಾಡಿ ಪತ್ರಿಕೋದ್ಯಮ ಇಂದು ಪತ್ರಿಕಾ ವಾಣಿಜ್ಯೋದ್ಯಮವಾಗಿ ಬದಲಾಗಿದೆ. ಜನರು ಅಪರಾಧ ಮತ್ತು ಅಪಘಾತದ ಸುದ್ದಿಗಳನ್ನು ಮುಖಪುಟದಲ್ಲಿ ಓದಲು ಬಯಸುತ್ತಾರೆ ಎಂಬ ವಿಷಯಗಳು ಕಳವಳಕಾರಿಯಾಗಿದೆ. ಹಣ ಒಳ್ಳೆಯವರ ಹಿಂದೆ ಹೋಗುತ್ತಿಲ್ಲ. ಒಳ್ಳೆಯವರು ಹಣದ ಹಿಂದೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸಾಮಾಜಿಕ ಬದಲಾವಣೆ ಮತ್ತು ಸುಧಾರಣೆಗಳನ್ನು ಮಾಡಲು ಬಯಸುವವರು ಪತ್ರಿಕೋದ್ಯಮದ ಮೂಲಕ ಏನನ್ನೂ ಸಾಧಿಸಲು ಅಸಾಧ್ಯವಾದಂತೆ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಮಾರ್ಮಿಕವಾಗಿ ನುಡಿಸಿದರು.
ಕೊಡಗು ಪತ್ರಿಕೋದ್ಯಮದ ಒಂದು ವಿಹಂಗಮ ನೋಟ ನೀಡಿದ ಅವರು, ಅನೇಕ ಪತ್ರಿಕೆ ಹುಟ್ಟು ಹಾಗೂ ಏಳುಬೀಳುಗಳನ್ನು ಅನುಭವದ ಹಿನ್ನೆಲೆಯಲ್ಲಿ ವಿವರಿಸಿದರು. ಕೊಡಗಿನಲ್ಲಿ ಕೂಡ ದೃಶ್ಯ ಮಾಧ್ಯಮಗಳ ಹುಟ್ಟು, ಬೆಳವಣಿಗೆ ಹಾಗೂ ಪ್ರಭಾವಗಳ ಕುರಿತು ಮಾತನಾಡಿದ ಅವರು ಪ್ರಸ್ತುತ ಜನಪ್ರಿಯವಾಗಿರುವ ಮೊಬೈಲ್ ಪತ್ರಿಕೋದ್ಯಮ ಮತ್ತು ಆನ್ಲೈನ್ ಪತ್ರಿಕೋದ್ಯಮದ ಬೆಳಕು ಚೆಲ್ಲಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ. ರಮೇಶ್ ಮಾತನಾಡಿ ಕೊಡಗಿನಲ್ಲಿ 58ಕ್ಕೂ ಹೆಚ್ಚು ಪತ್ರಿಕೆಗಳು ಬೆಳಕು ಕಂಡಿದ್ದು, ಕೇವಲ ನಾಲ್ಕರಿಂದ ಐದು ಮಾತ್ರ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸುವುದು ಎಷ್ಟು ಕಷ್ಟ ಎಂಬುದನ್ನು ವಿವರಿಸಿದರು.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಮಾತನಾಡಿ ಪತ್ರಿಕೆಗಳಿಂದ ಗ್ರಾಮೀಣ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಮಾತ್ರವಲ್ಲದೆ ಕ್ರೀಡೆ, ಕೃಷಿ, ಆರೋಗ್ಯ, ಶಿಕ್ಷಣ, ಪರಿಸರ, ವ್ಯಕ್ತಿತ್ವ ವಿಕಸನ, ಸ್ಪರ್ಧಾತ್ಮಕ ವಿಷಯಗಳಿಗೆ ತಯಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ಲಭ್ಯವಾಗುತ್ತದೆ. ನಮ್ಮ ಸಂಘದ ಧ್ಯೇಯೋದೇಶಗಳÀಲ್ಲಿ ಅಭಿವೃದ್ಧಿ ಪತ್ರಿಕೋದ್ಯಮವನ್ನು ಮುಖ್ಯವಾಗಿ ಇಟ್ಟುಕೊಂಡು ಕೃಷಿಗೆ ಪೂರಕವಾದ ವಿಷಯಗಳನ್ನು ಹೆಚ್ಚು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮುಂದುವರೆಯುತ್ತಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಎಸ್. ಜಾನ್, ಮಾತನಾಡಿದರು.
ಪತ್ರಿಕಾ ದಿನಾಚರಣೆ ಅಂಗವಾಗಿ ತಾಲೂಕಿನ ಹಿರಿಯ ಪತ್ರಕರ್ತರಾದ ಕೆ.ಎಚ್.ಶಿವಣ್ಣ, ಕೆ.ತಿಮ್ಮಪ್ಪ, ಬಿ.ಸಿ. ದಿನೇಶ್ ಹಾಗೂ ಕೊಡಗು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ವಿಘ್ನೇಶ್ ಭೂತನಕಾಡು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಮೊದಲಿಗೆ ವನಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಬೆಣ್ಣೆಹಣ್ಣಿನ ಗಿಡವನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಂಘದ ಸಿಲ್ವೆಸ್ಟರ್ ಡಿಸೋಜ ಸ್ವಾಗತಿಸಿ, ಕೆ.ತಿಮ್ಮಪ್ಪ ನಿರೂಪಿಸಿ, ನವೀನ್ ವಂದಿಸಿದರು.
Breaking News
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*
- *ವಿರಾಜಪೇಟೆ : ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ ಉಪನ್ಯಾಸ ಕಾರ್ಯಕ್ರಮ*
- *ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
- *ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ನೂತನ ಪದಾಧಿಕಾರಿಗಳ ನೇಮಕ : ಜಿಲ್ಲಾಧ್ಯಕ್ಷರಾಗಿ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆ*
- *ವಾರ ಭವಿಷ್ಯ : ಯಾರಿಗೆ ಈ ವಾರ ಶುಭ… : ನ.18 ರಿಂದ 24ರ ವರೆಗೆ*
- *ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
- *ಭಾಗಮಂಡಲದಲ್ಲಿ ಕಾವೇರಿ ಆರತಿ*
- *ಬೊಳ್ಳಮ್ಮಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ*