ಮಡಿಕೇರಿ ಜು.1 : ನಾಪೋಕ್ಲು ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿಯ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ನಿವಾಸಿ ಯೂಸುಫ್ (52) ಹಾಗೂ ಕೇರಳ ಮೂಲದ ರಜಾಕ್ (42) ಎಂಬುವವರನ್ನು 305 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಎಂ.ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ್ತದ ಸಿಪಿಐ ಅನೂಪ್ ಮಾದಪ್ಪ, ನಾಪೋಕ್ಲು ಪೊಲೀಸ್ ಠಾಣೆಯ ಪಿಎಸ್‍ಐ ಮಂಜುನಾಥ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕೊಳಕೇರಿ ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿತು.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.









