Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಿದ್ಧತೆ : ಹೆಬ್ಬೆಟ್ಟಗೇರಿಯಲ್ಲಿ ಗಮನ ಸೆಳೆದ ‘ಅಣಕು ಪ್ರದರ್ಶನ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಿದ್ಧತೆ : ಹೆಬ್ಬೆಟ್ಟಗೇರಿಯಲ್ಲಿ ಗಮನ ಸೆಳೆದ ‘ಅಣಕು ಪ್ರದರ್ಶನ’*

ಜುಲೈ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.1 : ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆಯು ತಾಲ್ಲೂಕಿನ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ನಡೆಯಿತು.

ಜಿಲ್ಲಾಡಳಿತ, ಎನ್‍ಡಿಆರ್‍ಎಫ್, ಪೊಲೀಸ್ ಮತ್ತು ಅಗ್ನಿಶಾಮಕ, ಗೃಹ ರಕ್ಷಕ ದಳ ಹೀಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆ ನಡೆಯಿತು.
ಭೂಕುಸಿತ, ಪ್ರವಾಹ ಮತ್ತಿತರ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಅಂತಹ ಸ್ಥಳದಲ್ಲಿ ವಿದ್ಯುತ್ ಕಡಿತಗೊಳಿಸುವುದು, ಘಟನಾ ಸ್ಥಳವನ್ನು ಸೀಲು ಮಾಡುವುದು, ಬಳಿಕ ರಕ್ಷಣಾ ಕಾರ್ಯ ಕೈಗೊಂಡು ಪ್ರಥಮ ಚಿಕಿತ್ಸೆ ನೀಡುವುದು, ಗಂಭೀರ ಗಾಯವಾಗಿದ್ದಲ್ಲಿ ಆಸ್ಪತ್ರೆಗೆ ಕರೆದೊಯ್ಯುವುದು… ಹೀಗೆ 9 ಕ್ಕೂ ಹೆಚ್ಚು ರೀತಿಯ ಅಣಕು ಪ್ರದರ್ಶನ ಜರುಗಿತು.
ಅಣಕು ಪ್ರದರ್ಶನದಲ್ಲಿ ಎನ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ದಳ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಯವರು ಕೈಜೋಡಿಸಿದರು.
ಹೆಚ್ಚಿನ ಮಳೆಯಿಂದ ಪ್ರವಾಹ, ಭೂಕುಸಿತ ಹೀಗೆ ವಿವಿಧ ರೀತಿಯ ಅತೀವೃಷ್ಟಿ ಉಂಟಾದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು.
ಅಣಕು ಕಾರ್ಯಾಚರಣೆಯಲ್ಲಿ ಎನ್‍ಡಿಆರ್‍ಎಫ್ ತಂಡದ ಇನ್ಸ್‍ಪೆಕ್ಟರ್ ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದಲ್ಲಿ 23 ಮಂದಿ, ಪೊಲೀಸ್ ಇಲಾಖೆಯಿಂದ ಡಿಎಆರ್ ತಂಡದ ಆರ್‍ಪಿಐ ಚೆನ್ನನಾಯಕ ನೇತೃತ್ವದಲ್ಲಿ 15 ಜನ ಪೊಲೀಸರು, ಅಗ್ನಿಶಾಮಕ ಇಲಾಖೆಯಿಂದ ನಾಗರಾಜು ನೇತೃತ್ವದಲ್ಲಿ 8 ಮಂದಿ, ಗೃಹ ರಕ್ಷಕ ದಳ ವಿಭಾಗದಿಂದ ಅಕ್ಷಯ್ ಅವರ ನೇತೃತ್ವದ 8 ಮಂದಿ ಸಿಬ್ಬಂದಿಗಳು, ಒಟ್ಟು 54 ಸಿಬ್ಬಂದಿಗಳು ಅಣಕು ಪ್ರದರ್ಶನದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಜಿಲ್ಲಾಡಳಿತದ ಸಹಯೋಗದಲ್ಲಿ ಎನ್‍ಡಿಆರ್‍ಎಫ್, ಪೊಲೀಸ್, ಗೃಹರಕ್ಷಕ ದಳ ವಿವಿಧ ಇಲಾಖೆಗಳ ಸಹಕಾರದಲ್ಲಿ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ 2018, 2019, 2020 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ತುಂಬಾ ತೊಂದರೆ ಆಗಿತ್ತು. ಆ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅಣಕು ಪ್ರದರ್ಶನದಿಂದ ಮಾಹಿತಿ ನೀಡಲಾಗಿದೆ ಎಂದರು.
‘ಪ್ರವಾಹ, ಭೂಕುಸಿತ ಮತ್ತಿತರ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ಕಾರ್ಯಾಚರಣೆ ಕೈಗೊಂಡು ರಕ್ಷಣೆ ಮಾಡಲಾಗುತ್ತದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ವೆಂಕಟ್ ರಾಜಾ ಅವರು ತಿಳಿಸಿದರು.’
ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸರಾಸರಿಯಷ್ಟು ಮಳೆಯಾಗುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವಿವರಿಸಿದರು.
ಎನ್‍ಡಿಆರ್‍ಎಫ್ ತಂಡದ ಪ್ರಮುಖರಾದ ಅರ್ಜುನ್ ಅವರು ಮಾತನಾಡಿ ಪ್ರಾಕೃತಿಕ ವಿಕೋಪದಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ವಿವರಿಸಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ರಕ್ಷಣಾ ಚಟುವಟಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಅವರು ಪ್ರಾಕೃತಿಕ ವಿಕೋಪ ಉಂಟಾದ ಸಂದರ್ಭದಲ್ಲಿ ಕಾರ್ಯಾಚರಣೆ ಕೈಗೊಳ್ಳುವ ಬಗ್ಗೆ ಹಲವು ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ತಹಶೀಲ್ದಾರ್ ಕಿರಣ್ ಗೌರಯ್ಯ, ಗಣಿ ಮತ್ತು ಭೂ ವಿಜ್ಞಾನಿಗಳಾದ ರಾಹುಲ್, ರೋಜಾ, ಪಿಡಿಒ ಸೆಲ್ವಿನ್, ಕಂದಾಯ ನಿರೀಕ್ಷಕರಾದ ರುದ್ರೇಶ್, ಪ್ರಸಾದ್, ಕಾರ್ಮಿಕ ಇಲಾಖೆ ಅಧಿಕಾರಿ ಹರ್ಷವರ್ಧನ್, ಪ್ರಮುಖರಾದ ಡೀನ್ ಬೋಪಣ್ಣ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.