ಮಡಿಕೇರಿ ಜು.2 : ಸಿಕ್ಕಿಂ ರಾಜ್ಯದ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ ಹೊಸ ಸಂಸತ್ ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.3 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೆಂಟ್ರಲ್ ವಿಸ್ಟಾ ಇದಕ್ಕಾಗಿ ಪ್ರತ್ಯೇಕ ವಿಶೇಷ ವರ್ಚುವಲ್ ಮತ್ತು ಅಮೂರ್ತ ಲೋಕಸಭೆ ಸ್ಥಾನಗಳನ್ನು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗ ಕೊಡವರಿಗೆ ನೀಡಬೇಕೆಂದು ಒತ್ತಾಯಿಸಿ ರಾಷ್ಟçಪತಿಗಳು ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಗೆ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಸಿಕ್ಕಿಂ ರಾಜ್ಯದ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ ಕೊಡವರಿಗೂ ಸಂಸತ್ ನಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.










